Home News ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ರಾಜೀವ್‍ಗೌಡ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ರಾಜೀವ್‍ಗೌಡ

0
Rajiv Gowda Sidlaghatta Congress

Sidlaghatta : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಚುನಾವಣಾ ಪೂರ್ವದಲ್ಲಿ ಜನರಿಗೆ ಮಾಡಿರುವ ವಾಗ್ದಾನವನ್ನು ಹಂತಹಂತವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಎಬಿಡಿ ಸಂಸ್ಥೆಯ ಅಧ್ಯಕ್ಷ ರಾಜೀವ್‍ ಗೌಡ ಹೇಳಿದರು.

ನಗರದ ಎಬಿಡಿ ಸಂಸ್ಥೆಯ ಕಚೇರಿಯಲ್ಲಿ ಏನಿಗದೆಲೆ ಗ್ರಾ.ಪಂ ಅಧ್ಯಕ್ಷೆ ಶಿವಮ್ಮ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಕ್ಷೇತ್ರದ ಅಭಿವೃದ್ದಿಗಾಗಿ ಸರ್ಕಾರದಿಂದ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತೇನೆ. ಜೊತೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಪಕ್ಷವನ್ನು ಸಂಘಟಿಸುತ್ತೇನೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್‍ಗೌಡ ಮಾತನಾಡಿ, ಕ್ಷೇತ್ರದ ಏನಿಗದೆಲೆ ಮತ್ತು ಕೆಂಚಾರ್ಲಹಳ್ಳಿ ಗ್ರಾ.ಪಂ.ಯಲ್ಲಿ ಕಾಂಗ್ರೆಸ್ ಬೆಂಬಲಿತರು ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. ಅದೇ ರೀತಿ ಇನ್ನಿತರೆ ಗ್ರಾ.ಪಂಗಳು ಸಹ ಕಾಂಗ್ರೆಸ್ ವಶವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಂಘಟಿತ ಪ್ರಯತ್ನದಿಂದ ಗ್ರಾ.ಪಂಯಲ್ಲಿ ಪಕ್ಷದ ಬೆಂಗಲಿತರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಮುಂದಿನ ದಿನಗಳಲ್ಲಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ ಎಂದರು.

ಕಾಂಗ್ರೆಸ್ ಮುಖಂಡ ಶ್ರೀನಾಥರೆಡ್ಡಿ ಮಾತನಾಡಿ ಮಾಜಿ ಸಚಿವ ವಿ ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅವರ ಮಾರ್ಗದರ್ಶನದಲ್ಲಿ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಅತ್ಯುತ್ತಮವಾಗಿ ಸಾಧನೆ ಮಾಡಿದ್ದಾರೆ ಅದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಅವರು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಏನಿಗದೆಲೆ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಮುಖಂಡರಾದ ನಾರಾಯಣರೆಡ್ಡಿ, ಪಿವಿ ಸುಧಾಕರ್ ರೆಡ್ಡಿ, ಸುಬ್ಬಾರೆಡ್ಡಿ, ಚಂದ್ರಾರೆಡ್ಡಿ, ಆನಂದರೆಡ್ಡಿ, ರಾಜರೆಡ್ಡಿ, ಸೈಯದ್ ಬಾಬಾ, ಆನೂರು ರವಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version