ತಾಲ್ಲೂಕಿನ ಗಂಜಿಗುಂಟೆ ಪಂಚಾಯಿತಿಯ ಹಕ್ಕಿಪಿಕ್ಕಿ ಕಾಲೋನಿ ಮತ್ತು ಬಾಳೇಗೌಡನಹಳ್ಳಿಯ 160 ಕುಟುಂಬಗಳಿಗೆ ಶ್ರೀ ಎಚ್.ಡಿ.ದೇವೇಗೌಡ ಹಾಗೂ ಜಯಪ್ರಕಾಶ್ ನಾರಾಯಣ್ ಸೇವಾಭಿವೃದ್ದಿ ಟ್ರಸ್ಟ್ ವತಿಯಿಂದ ದಿನಸಿ ಕಿಟ್ ವಿತರಿಸಿ ಜೆಡಿಎಸ್ ಮುಖಂಡ ಪೂಲಕುಂಟ್ಲಹಳ್ಳಿ ರಘುನಾಥರೆಡ್ಡಿ ಮಾತನಾಡಿದರು.
ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ದಿನಗೂಲಿಯನ್ನೇ ನಂಬಿದವರ ಬದುಕು ಬಹಳ ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಜನರ ಕಷ್ಟವನ್ನು ಕಡಿಮೆ ಮಾಡಬೇಕು. ಬಡವರಿಗೆ ನೆರವಾಗಿ ಮಾನವೀಯತೆಯನ್ನು ಪ್ರದರ್ಶಿಸಬೇಕಾದ ಸಂದರ್ಭವಿದು ಎಂದು ಅವರು ತಿಳಿಸಿದರು.
ಶ್ರೀ ಎಚ್.ಡಿ.ದೇವೇಗೌಡ ಹಾಗೂ ಜಯಪ್ರಕಾಶ್ ನಾರಾಯಣ್ ಸೇವಾಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ಬಿ.ಎನ್.ರವಿಕುಮಾರ್ ಅವರ ನೇತೃತ್ವದಲ್ಲಿ ತಾಲ್ಲೂಕಿನಾದ್ಯಂತ ಕೊರೊನಾ ವಾರಿಯರ್ ಗಳಿಗೆ ಹಾಗೂ ಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಿಸುತ್ತಿದ್ದೇವೆ. ಹಾಗೆಯೇ ಕೊರೊನಾ ಕುರಿತಾದ ಮುಂಜಾಗೃತಾ ಕ್ರಮಗಳ ಬಗ್ಗೆಯೂ ತಿಳಿಸುತ್ತಿದ್ದೇವೆ. ಮುನ್ನಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ವೈದ್ಯರು ಸೂಚಿಸಿದ ಔಷಧಿ ಸೇವಿಸಿ. ಸೋಂಕಿತರು ಇತರರೊಂದಿಗೆ ಬೆರೆಯಬೇಡಿ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ನಾರಾಯಣರೆಡ್ಡಿ, ಉಪಾಧ್ಯಕ್ಷ ಗಂಜಿಗುಂಟೆ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ದೀಪಾ ರಾಂ ಬಾಬು, ಮುಖಂಡರಾದ ರಾಂ ಬಾಬು, ಜನಾರ್ಧನರೆಡ್ಡಿ, ವೇಣು, ಮಂಜುನಾಥರೆಡ್ಡಿ ಹಾಜರಿದ್ದರು.