Sidlaghatta : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗೆ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜನವರಿ 5 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು, ತಮ್ಮ ಸಮೀಪದ ವಸತಿ ಶಾಲೆಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 22 ಆಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುವ ದಾಖಲಾತಿಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ್, SATS ನಂಬರ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಇತ್ತೀಚಿನ ಪೋಟೋ ಸಲ್ಲಿಸಬೇಕು. ಪರೀಕ್ಷೆ ಮಾರ್ಚ್ 12 ರಂದು ನಡೆಯಲಿದೆ ಎಂದು ಅಪ್ಪೇಗೌಡನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.