News

ವಿದ್ಯಾರ್ಥಿನಿ ದೂರು: ವಸತಿ ಶಾಲೆ ಪ್ರಭಾರ ಪ್ರಾಂಶುಪಾಲರ ಅಮಾನತು, ತನಿಖೆ ಮುಂದುವರಿಕೆ

Representative graphic on POCSO and child safety with Childline 1098 and emergency 112 helpline numbers

Sidlaghatta : ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಅಮಾನತುಗೊಳಿಸಿದ್ದಾರೆ.

ಸೆ.26ರಂದು ಶಾಲೆಯ ಪ್ರಥಮ ಚಿಕಿತ್ಸಾ ಕೊಠಡಿಯಲ್ಲಿ ಪ್ರಭಾರ ಪ್ರಾಂಶುಪಾಲರು ಅಸಮರ್ಪಕವಾಗಿ ಸ್ಪರ್ಶಿಸಿದ್ದಾರೆ ಎಂದು ವಿದ್ಯಾರ್ಥಿನಿ ದಿಬ್ಬೂರಹಳ್ಳಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸೆ.28ರಂದು POCSO ಕಾಯ್ದೆಯಡಿ ಪ್ರಕರಣ (ನಂ.139/2026) ದಾಖಲಾಗಿದೆ.

ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ–1957ರ ನಿಯಮ 10(1)(ಡಿ) ಹಾಗೂ ಸಂಬಂಧಿತ ನಿಯಮಗಳಡಿ ಅವರನ್ನು ಅಮಾನತುಗೊಳಿಸಲಾಗಿದೆ.

ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ನಿರ್ಧಾರವಾಗಬೇಕಿದೆ.

ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಯಾರನ್ನು ಸಂಪರ್ಕಿಸಬೇಕು?

ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ಅಥವಾ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಬಹುದು.

ಈ ಪ್ರಕರಣದ ಆರಂಭಿಕ ವರದಿಗಾಗಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ POCSO ಪ್ರಕರಣ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Share
error: Content is protected !!