Sidlaghatta : ಶಿಡ್ಲಘಟ್ಟ ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಸೋಮವಾರ ಎಸ್.ಸಿ.ಐ ನವಜೀವನ ಸೇವಾ ಸಂಘ ಮತ್ತು ಸಕ್ಷಮ ರಾಷ್ಟ್ರೀಯ ಸಂಘಟನೆಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ 15 ಮಂದಿ ಅಂಧ ಮತ್ತು ಅಂಗವಿಕಲ ಮಕ್ಕಳಿಗೆ ವಿದ್ಯಾರ್ಥಿವೇತನದ ಚೆಕ್ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ, ಈ ಮಕ್ಕಳು ಬೇರೆಯವರಿಗಿಂತ ಕಡಿಮೆಯಲ್ಲ, ಸಮಾಜ ಅವರ ಬಗೆಗಿನ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು. ಸರ್ಕಾರದ ಸವಲತ್ತುಗಳು ಇವರಿಗೆ ಸಿಗುವಂತೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಎಸ್.ಸಿ.ಐ ನವಜೀವನ ಸೇವಾ ಸಂಘದ ಅಧ್ಯಕ್ಷ ಎನ್.ಮುನಿರಾಜು, ಕಾರ್ಯದರ್ಶಿ ಕೆ.ಪಿ.ರವಿ, ಟಿ.ಪಿ.ರಾಮಚಂದ್ರ, ಆಶಾಕಿರಣ ಅಂಧಮಕ್ಕಳ ಶಾಲೆಯ ಮುಖ್ಯಸ್ಥ ಗೋಪಾಲ್, ಸಕ್ಷಮ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.