ತಾಲ್ಲೂಕಿನ ಕೆಲವು ಖಾಸಗಿ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ಶಿಕ್ಷಣ ಸಚಿವರನ್ನು ಭೇಟಿ ಮಾಡಿ 2020-21 ನೇ ಸಾಲಿನ ಶಾಲಾ ಶುಲ್ಕದಲ್ಲಿ ಶೇ 20 ರಷ್ಟು ರಿಯಾಯಿತಿಯನ್ನು ನೀಡುವ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.
ಕೋವಿಡ್ 19 ರ ಸಂದರ್ಭದಲ್ಲಿ ಲಕ್ಷಾಂತರ ಪೋಷಕರು ಸಂಕಷ್ಟದಲ್ಲಿದ್ದಾರೆ. ಪೋಷಕರು ಶಾಲಾ ಶುಲ್ಕವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಸ್ವಯಂ ಪ್ರೇರಣೆಯಿಂದ ಖಾಸಗಿ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ಶಾಲಾ ಶುಲ್ಕದಲ್ಲಿ ಶೇ 20 ರಷ್ಟು ರಿಯಾಯಿತಿಯನ್ನು ನೀಡುವುದಾಗಿ ಹೇಳಿದ್ದಾರೆ.
ಡಾಲ್ಫಿನ್ ವಿದ್ಯಾಸಂಸ್ಥೆ ಅಧ್ಯಕ್ಷ ಎ.ನಾಗರಾಜ್, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮಹಮದ್ ತಮೀಮ್ ಅನ್ಸಾರಿ ಹಾಜರಿದ್ದರು.