Jangamakote, Sidlaghatta :ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಜಗತ್ತಿನ ಇನ್ನೂರಕ್ಕೂ ಹೆಚ್ಚು ದೇಶಗಳಲ್ಲಿ ಸಕ್ರಿಯವಾಗಿದ್ದು ವಿದ್ಯಾರ್ಥಿಗಳ ಹಾಗೂ ಯುವಜನತೆಯ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಲು ಅತ್ಯುತ್ತಮ ಸಾಧನವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ತಿಳಿಸಿದರು.
ತಾಲ್ಲೂಕನ ಜಂಗಮಕೋಟೆ ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರಾದ ಲಾರ್ಡ್ ಬೇಡನ್ ಪೋವೆಲ್ ರವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಭ್ರಾತೃತ್ವ ದಿನಾಚರಣೆ ಮತ್ತು ವಿಶ್ವ ಚಿಂತನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳು ಸ್ವಯಂಶಿಸ್ತು, ಪರೋಪಕಾರ ಮತ್ತು ದೇಶ ಸೇವೆಯ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಶಾಲೆಯ ಎಲ್ಲ ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ಸಂಸ್ಥೆಯ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ವೈಯಕ್ತಿಕ ಬೆಳವಣಿಗೆ ಹಾಗೂ ಕೌಶಲ್ಯಗಳನ್ನು ಉತ್ತಮಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಶಾಲೆಯ ಹಿರಿಯ ಶಿಕ್ಷಕಿ ಗೈಡ್ ಕ್ಯಾಪ್ಟನ್ ನಾಗರತ್ನ ರವರು ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಿಂದ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಾಧ್ಯವಿದ್ದು ಎಲ್ಲಾ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಿಯಮ ಮತ್ತು ಪ್ರತಿಜ್ಞೆಯಂತೆ ನಡೆದುಕೊಳ್ಳಬೇಕೆಂದು ತಿಳಿಸಿದರು. ಶಿಕ್ಷಕಿ ಲತಾರವರು ವಿದ್ಯಾರ್ಥಿಗಳಿಗೆ ಶುಭ ಕೋರಿ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳ ಜೀವನ ಉಜ್ವಲವಾಗಲಿ ಎಂದು ಹಾರೈಸಿದರು
ಕಾರ್ಯಕ್ರಮದ ಅಂಗವಾಗಿ ಶಾಲೆಯ ಆವರಣದ ಸ್ವಚ್ಛತೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.