Tippenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಿಪ್ಪೇನಹಳ್ಳಿ-ತುಮ್ಮನಹಳ್ಳಿ ಮಾರ್ಗದ ಮಧ್ಯದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವವು ಗುರುವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು. ನಗರ ಮತ್ತು ತಾಲ್ಲೂಕಿನ ವಿವಿಧ ಭಾಗಗಳ ಜೊತೆಗೆ ಜಿಲ್ಲೆಯ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಆಗಮಿಸಿ, ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಮಹೋತ್ಸವದ ಅಂಗವಾಗಿ ಬುಧವಾರದಿಂದಲೇ ವಿವಿಧ ಪೂಜಾ ವಿಧಿ ವಿಧಾನಗಳು ನೆರವೇರಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಸೇವೆಯೂ ಆಯೋಜಿಸಲಾಗಿತ್ತು.
ಈ ಮಹೋತ್ಸವದಲ್ಲಿ ಮಾಜಿ ಸಚಿವ ವಿ. ಮುನಿಯಪ್ಪ, ಕೆಎಂಎಫ್ ನಿರ್ದೇಶಕ ಆರ್. ಶ್ರೀನಿವಾಸ್, ಆಂಜನಪ್ಪ ಪುಟ್ಟು, ವಿ. ಸುಬ್ರಮಣಿ, ದೇವಾಲಯ ಸಮಿತಿಯ ಭರತ್ ಭೂಷಣ್, ಲಕ್ಷ್ಮೀನಾರಾಯಣ್, ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ ನಾಗರಾಜ್, ಟಿ.ಎಸ್. ಮನೋಹರ್, ಗೋವಿಂದರೆಡ್ಡಿ, ಆನಂದ್, ಮಂಜುನಾಥ್, ಟಿ.ಎನ್. ಆನಂದ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಭಕ್ತಿ ಅರ್ಪಿಸಿದರು.