Home News ಶಿಡ್ಲಘಟ್ಟ ತಾಲ್ಲೂಕಿನಲ್ಲಿ 25 ಕಿ.ಮೀ ಮಾನವ ಸರಪಳಿ

ಶಿಡ್ಲಘಟ್ಟ ತಾಲ್ಲೂಕಿನಲ್ಲಿ 25 ಕಿ.ಮೀ ಮಾನವ ಸರಪಳಿ

0
sidlaghatta 25 km human chain

Sidlaghatta : ಭಾರತದ ಸಂವಿಧಾನದ ಅರ್ಥ, ರಚನೆ, ಶಾಸನ, ವೈಶಿಷ್ಟ್ಯಗಳು ಮತ್ತು ಮಹತ್ವವನ್ನು ಅರಿಯಬೇಕು. ನಮ್ಮ ದೇಶದ ಮೌಲ್ಯಗಳು, ತತ್ವಗಳು ಮತ್ತು ಆಡಳಿತದ ಚೌಕಟ್ಟನ್ನು ಒಳಗೊಂಡಿರುವ ಸಂವಿಧಾನ ಅರಿತಾಗ ಎಲ್ಲರಲ್ಲೂ ದೇಶ ಪ್ರೇಮ, ಕಾನೂನಿನ ಮೇಲೆ ಗೌರವವೂ ಹೆಚ್ಚುತ್ತದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಗಡಿಭಾಗ ಲಕ್ಕಹಳ್ಳಿ ಗೇಟ್‌ ನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಿರ್ಮಿಸಿದ್ದ ಮಾನವ ಸರಪಳಿಯಲ್ಲಿ ತಾವೂ ಕೈ ಜೋಡಿಸಿ ಸಂವಿಧಾನ ಪ್ರತಿಜ್ಞೆ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಬೀದರ್‌ ನಿಂದ ಚಾಮರಾಜನಗರ ಜಿಲ್ಲೆಯವರೆಗೂ ಇಡೀ ರಾಜ್ಯದ ಉದ್ದಗಲಕ್ಕೂ ಮಾನವ ಸರಪಳಿ ನಿರ್ಮಿಸಿ ಈಗಿನ ಎಲ್ಲರಲ್ಲೂ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನ ಕುರಿತು ಇನ್ನಷ್ಟು ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರು, ಅಧಿಕಾರಿ ಮತ್ತು ಸಿಬ್ಬಂದಿ ಎಲ್ಲರೂ ಈ ದಿನಾಚರಣೆಯಲ್ಲಿ ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ತಹಸೀಲ್ದಾರ್ ಬಿ.ಎನ್.ಸ್ವಾಮಿ ಅವರು ಸಂವಿಧಾನದ ಪೀಠಿಕೆಯನ್ನು ಓದಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 25 ಕಿ.ಮೀ ಮಾನವ ಸರಪಳಿಯನ್ನು ನಿರ್ಮಿಸಲು ಅಧಿಕಾರಿಗಳು, ಶಿಕ್ಷಕರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಮಹಿಳೆಯರು ಎಲ್ಲರೂ ಉತ್ಸಾಹದಿಂದ ಭಾಗಿಯಾಗಿದ್ದಾರೆ. ನಾವೆಲ್ಲಾ ಒಂದು, ಸಂವಿಧಾನವೇ ನಮಗೆ ಶ್ರೇಷ್ಠ. ಮಾನವ ಬಂಧುತ್ವವನ್ನು ಸಾರೋಣ ಎನ್ನುವ ಸಂದೇಶದೊಂದಿಗೆ ನಾವೆಲ್ಲಾ ಮಾನವ ಸರಪಳಿಯನ್ನು ನಿರ್ಮಿಸಿದ್ದೇವೆ ಎಂದರು.

ಇದೇ ವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಾಯಿತು.

ತಾಲ್ಲೂಕಿನ ಚಿಕ್ಕಬಳ್ಳಾಪುರ ಭಾಗದ ಗಡಿಭಾಗ ಲಕ್ಕಹಳ್ಳಿ ಗೇಟ್‌ ನಿಂದ ಕೋಲಾರ ಭಾಗದ ಗಡಿ ಎಚ್.ಕ್ರಾಸ್‌ ವರೆಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾನಾ ಇಲಾಖೆ ಅಧಿಕಾರಿ, ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ನಿರ್ಮಿಸಿದ್ದರು.

ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಬಿಇಒ ನರೇಂದ್ರ ಕುಮಾರ್, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಭೆ ಆಯುಕ್ತ ಮಂಜುನಾಥ್ ಅಧ್ಯಕ್ಷ ವೆಂಕಟಸ್ವಾಮಿ, ಉಪಾಧ್ಯಕ್ಷೆ ರೂಪ ನವೀನ್, ಸದಸ್ಯರಾದ ಅನಿಲ್ ಕುಮಾರ್, ಮಂಜುನಾಥ್, ಫುಡ್ ಮನೋಹರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್, ಸರ್ಕಾರಿ ನೌಕರರ ಅಧ್ಯಕ್ಷ ಸುಬ್ಬಾರೆಡ್ಡಿ, ಮೇಲೂರು ಮಂಜುನಾಥ್, ಬಂಕ್ ಮುನಿಯಪ್ಪ, ತಾದೂರು ರಘು, ಕ್ರೆಸೆಂಟ್ ವಿದ್ಯಾಸಂಸ್ಥೆಯ ತಮೀಮ್ ಅನ್ಸಾರಿ, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಡಾಲ್ಫಿನ್ ನಾಗರಾಜ್, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version