ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 12-14 ವರ್ಷದ ಮಕ್ಕಳಿಗೆ ಶನಿವಾರ ತಾಲ್ಲೂಕು ಆರೋಗ್ಯಧಿಕಾರಿ ಡಾ.ವೆಂಕಟೇಶ್ ಮೂರ್ತಿ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ 12-14 ವರ್ಷ ವಯೋಮಾನದ ಮಕ್ಕಳಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ತಿಳಿಸಿದರು.
12 ರಿಂದ 13 ವರ್ಷ ಹಾಗೂ 13ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ. ಈ ಲಸಿಕೆಯನ್ನು ಎರಡು ಡೋಸ್‌ಗಳನ್ನು ನೀಡಲು ಉದ್ದೇಶಿಸಿದ್ದು, ಇವುಗಳ ನಡುವೆ 28 ದಿನಗಳ ಅಂತರವಿರಬೇಕು ಎಂದು ಮಾರ್ಗಸೂಚಿ ತಿಳಿಸಿದೆ.
2010 ಹಾಗೂ ಅದಕ್ಕೂ ಮುನ್ನ ಜನಿಸಿರುವವರು ಅಂದರೆ, 12 ವರ್ಷ ಪೂರ್ಣಗೊಂಡ ಮಕ್ಕಳು ‘ಕೋವಿನ್’ನಲ್ಲಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ನೋಂದಣಿ ಆಧಾರದಲ್ಲಿ ಲಸಿಕೆ ನೀಡುವ ದಿನಾಂಕ ಹಾಗೂ ಸಮಯ ನಿಗದಿಯಾಗುತ್ತದೆ. ಲಸಿಕೆ ಪಡೆಯುವ ದಿನಾಂಕಕ್ಕೆ ಸರಿಯಾಗಿ 12 ವರ್ಷ ತುಂಬಿರುವುದು ಕಡ್ಡಾಯ. ಒಂದು ವೇಳೆ ಕೋವಿನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದರೂ, ಮಗುವಿಗೆ 12 ವರ್ಷ ತುಂಬದಿದ್ದ ಪಕ್ಷದಲ್ಲಿ, ಲಸಿಕೆ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ನೋಂದಣಿಗೆ ಹಲವು ವಿಧಾನಗಳನ್ನು ಸೂಚಿಸಲಾಗಿದೆ. ಕೋವಿನ್‌ನಲ್ಲಿ ಹೊಸ ಖಾತೆ ತೆರೆದು ನೋಂದಣಿ ಮಾಡಿಕೊಳ್ಳಬಹುದು. ಕುಟುಂಬ ಸದಸ್ಯರು ಈಗಾಗಲೇ ಕೋವಿನ್ ಖಾತೆ ಹೊಂದಿದ್ದರೆ, ಅದರ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಲಸಿಕಾ ಕೇಂದ್ರದಲ್ಲೇ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ.ಯಶ್ವಂತ್, ಆಸ್ಪತ್ರೆಯ ಸಿಬ್ಬಂದಿ ವಿಜಯಮ್ಮ, ದೀಪಾ, ದರ್ಶಿನಿ, ನಬೀಉಲ್ಲಾ, ಶೋಭಾ ಹಾಜರಿದ್ದರು.
ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿ ಒದಗಿಸುವ ಮೂರನೇ ಹಂತದ ಅಭಿಯಾನವನ್ನು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಪ್ರಾರಂಭಿಸಿದರು. ಸೋಮವಾರ 60 ವರ್ಷ ವಯಸ್ಸಿನ ಅಥವಾ ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲಾಯಿತು. “60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಇತರೆ ಆನಾರೋಗ್ಯ (ಕೋಮಾರ್ಬಿಡಿಟಿ) ಸಮಸ್ಯೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಅರ್ಹ ವ್ಯಕ್ತಿಗಳು ಲಸಿಕೆ ಪಡೆಯುವುದಕ್ಕಾಗಿ ಕೋ–ವಿನ್ ಆ್ಯಪ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಿಂದ ಸಮಯ…
ವಿವಿಧ ಇಲಾಖೆಗಳ ಸಹಯೋಗದಲ್ಲಿ ಮತ್ತು ಪರಿಶ್ರಮದಿಂದಾಗಿ ತಾಲ್ಲೂಕಿನಾದ್ಯಂತ ಒಟ್ಟಾರೆ ಶೇ 86 ರಷ್ಟು ಎರಡನೇ ಡೋಸ್ ಲಸಿಕೆಯನ್ನು ಹಾಕಿಸಲಾಗಿದೆ. 15-18 ವರ್ಷದ ಶೇ 90 ರಷ್ಟು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಿಸಿದ್ದೇವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು. ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಶಾಸಕ ವಿ.ಮುನಿಯಪ್ಪ ಚಾಲನೆ ನೀಡಿದ ನಂತರ ಅವರು ಮಾಹಿತಿ ನೀಡಿದರು. ಎರಡನೇ ಡೋಸ್ ಲಸಿಕೆ ಪಡೆದ 9…
ಶಿಡ್ಲಘಟ್ಟ ನಗರದ ಹನ್ನೊಂದನೇ ವಾರ್ಡಿನ ಕುಂಬಾರಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಕೋವಿಡ್ ಲಸಿಕಾ ಆಂದೋಲನಕ್ಕೆ ಚಾಲನೆ ನೀಡಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿದರು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 18 ವರ್ಷ ಮೇಲ್ಪಟ್ಟವರು ಶೇ 53 ರಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಲಸಿಕೆ ಹಾಕಿಸಿರುವ ಕಾರಣ ಪ್ರತಿಯೊಂದು ವಾರ್ಡುಗಳಲ್ಲೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕೆ ಆಂದೋಲನವನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ತಾಲ್ಲೂಕನ್ನು…