Home News ಬಕ್ರೀದ್ ಹಬ್ಬ ಆಚರಣೆ

ಬಕ್ರೀದ್ ಹಬ್ಬ ಆಚರಣೆ

0
Sidlaghatta Bakrid - Eid Al Adha

Sidlaghatta : ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಮುಸ್ಲೀಮರು ತ್ಯಾಗ ಬಲಿದಾನಗಳ ಸಂಕೇತವಾಗಿರುವಂತಹ ಬಕ್ರೀದ್ ಹಬ್ಬವನ್ನು (Bakrid – Eid Al Adha) ಭಾನುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಈದ್ಗಾ ಮೈದಾನದಲ್ಲಿ ಸೇರಿ ಪ್ರಾಥನೆಯನೆಯನ್ನು ಸಲ್ಲಿಸದೇ ಮಳೆಯ ಕಾರಣದಿಂದ ನಗರದ ವಿವಿಧ ಮಸೀದಿಗಳಲ್ಲಿ ಮುಸ್ಲೀಮರು ಸಕಲ ಮಾನವ ಕುಲದ ಒಳಿತಿಗಾಗಿ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದರು.

ಪರಸ್ಪರ ಅಪ್ಪಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ಈ ಸಂದರ್ಭದಲ್ಲಿ ವಿನಿಮಯಿಸಿಕೊಂಡ ಜಮಾತ್ ಬಾಂಧವರು ಮಸೀದಿಗಳಲ್ಲಿ ದುವಾ ನೆರವೇರಿಸಿದರು.

“ಬಕ್ರೀದ್ ಹಬ್ಬವನ್ನು ಈದ್-ಅಲ್-ಅದಾ ಎಂದೂ ಕರೆಯುತ್ತಾರೆ. ಈದ್-ಅಲ್-ಅದಾ ಹಬ್ಬವನ್ನು ಮುಸ್ಲೀಮರು, ಮುಸ್ಲಿಂ ಮಾಸಿಕವಾದ ಝುಲ್-ಹಿಜ್ಜಾದ ಹತ್ತನೆಯ ದಿನದಂದು ಆಚರಿಸುತ್ತಾರೆ. ಈ ಶುಭದಿನದಂದು ಕುರಿಯನ್ನು ಬಲಿ ನೀಡುತ್ತಾರೆ ಹಾಗೂ ಮಸೀದಿಗಳಲ್ಲಿ ಪ್ರಾರ್ಥಿಸುತ್ತಾರೆ. ಹಸ್ರತ್ ಇಬ್ರಾಹಿಮ್ ಅಲ್ಲಾಹನಿಗೆ ಶರಣಾಗುವ ಅಗ್ನಿಪರೀಕ್ಷೆಯ ಸ್ಮರಣಾರ್ಥವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಬಲಿಗೊಳ್ಳುವ ಪಶುವಿನ ಮಾಂಸವನ್ನು ಬಳಸಿಕೊಳ್ಳುವುದರ ಕುರಿತು ಇಸ್ಲಾಂ ನಲ್ಲಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಬಲಿಪಶುವಿನ ಮಾಂಸವನ್ನು ಮೂರು ಭಾಗಗಳಾಗಿ ವಿಭಾಗಿಸಿ, ದೊಡ್ಡಭಾಗವನ್ನು, ಅಶಕ್ತರಾದ ಅಥವಾ ಆ ದಿನದ ಊಟವನ್ನು ಗಳಿಸಲಾಗದ ಬಡವರಲ್ಲಿ ಹಂಚಬೇಕು. ಮಿಕ್ಕುಳಿದ ಎರಡು ಚಿಕ್ಕ ತುಂಡುಗಳನ್ನು ಗೆಳೆಯರು, ಬಂಧುಗಳು ಮತ್ತು ಕುಟುಂಬದ ಸದಸ್ಯರ ನಡುವೆ ಹಂಚಬೇಕು. ಇದು ಸಂಭ್ರಮದ ಹಾಗೂ ಭೂರಿಭೋಜನದ ಸಂದರ್ಭವಾಗಿದೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ, ಈ ಹಬ್ಬವು ಏಕತೆ ಹಾಗೂ ಭ್ರಾತೃತ್ವದ ಆಚರಣೆಯಾಗಿದೆ” ಎಂದು ಜಾಮೀಯಾ ಮಸೀದಿಯ ಧರ್ಮಗುರು ತಿಳಿಸಿದರು.

ರಾಜಕೀಯ ಮುಖಂಡರೂ ಸೇರಿದಂತೆ ವಿವಿಧ ಜನಾಂಗದವರೂ ಕೂಡಾ ಮುಸ್ಲಿಂ ಭಾಂಧವರಿಗೆ ಶುಭಾಶಯಗಳನ್ನು ಕೋರಿದರು. ಶಾಸಕ ವಿ.ಮುನಿಯಪ್ಪ ಜಾಮಿಯಾ ಮಸೀದಿಯ ಮದರಸಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಮರಿಗೆ ಶುಭಕೋರಿದರು.

ಜಾಮಿಯಾ ಮಸೀದಿಯ ಅಧ್ಯಕ್ಷ ರಫೀಕ್ ಸಾಬ್, ಕಾರ್ಯದರ್ಶಿ ಸಲಾಂ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version