
Bashettahalli, Sidlaghatta: ದಿಬ್ಬೂರಹಳ್ಳಿ ರಸ್ತೆಯ ಬಶೆಟ್ಟಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾರುತಿ ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ಒಂದರ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬಾಗೇಪಲ್ಲಿ ತಾಲೂಕಿನ ಬೂಡಿದಿಗಡ್ಡಿಪಳ್ಳಿ ಗ್ರಾಮದ ಜಗದೀಶ್ (40) ಮತ್ತು ಸರಸ್ವತಮ್ಮ (35), ಜೊತೆಗೆ ಗೊಲ್ಲಹಳ್ಳಿ ಗ್ರಾಮದ ಚಂದ್ರಶೇಖರ್ (55) ಎಂಬವರು ಗಾಯಗೊಂಡಿದ್ದಾರೆ.
ಅಪಘಾತದ ನಂತರ ಗಾಯಾಳುಗಳನ್ನು ತಕ್ಷಣವೇ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪಘಾತದ ಹಿನ್ನೆಲೆಯಲ್ಲಿ ಸಂಚಾರ ಕೆಲ ಕಾಲ ಅಸ್ತವ್ಯಸ್ತಗೊಂಡಿತ್ತು.