
Sidlaghatta : ಫೆಬ್ರವರಿ 17 ರ ಶುಕ್ರವಾರದಂದು ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಂಡಿರುವಾದಾಗಿ BESCOM ಇಲಾಖೆಯ ಬಿ.ಪ್ರಭು ತಿಳಿಸಿದ್ದಾರೆ
ಫೆ 17 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಡ್ಲಘಟ್ಟ ಬೆಸ್ಕಾಂ ಗ್ರಾಮೀಣ ಉಪವಿಭಾಗದಿಂದ ಹಂಡಿಗನಾಳ ಗ್ರಾಮ ಪಂಚಾಯಿತಿಯ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಮತ್ತು ಶಿಡ್ಲಘಟ್ಟ ಬೆಸ್ಕಾಂ ನಗರ ಉಪವಿಭಾಗದಿಂದ ಕೊತ್ತನೂರು ಗ್ರಾಮ ಪಂಚಾಯಿತಿಯ ಪಿಂಡಿಪಾಪನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅದಾಲತ್ ನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಹಂಡಿಗನಾಳ ಗ್ರಾಮ ಪಂಚಾಯಿತಿಯ ಅಪ್ಪೇಗೌಡನಹಳ್ಳಿ ಮತ್ತು ಕೊತ್ತನೂರು ಗ್ರಾಮ ಪಂಚಾಯಿತಿಯ ಪಿಂಡಿಪಾಪನಹಳ್ಳಿ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಲು ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.
ಫೆಬ್ರವರಿ 17 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯಾತ್ ಸುರಕ್ಷತಾ ಸಭೆಯನ್ನು ಶಿಡ್ಲಘಟ್ಟ ಬೆಸ್ಕಾಂ ಕಛೇರಿಯಲ್ಲಿ ಹಮ್ಮಿಕೊಂಡಿದ್ದಾರೆ.
ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಸಭೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ರೈತ ಸಂಘದ ಮುಖಂಡರು, ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿಯಲು ಸಭೆಗೆ ಆಗಮಿಸಬೇಕೆಂದು ಶಿಡ್ಲಘಟ್ಟ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ಪ್ರಭು ಕೋರಿದ್ದಾರೆ.