Home News ಶಿಡ್ಲಘಟ್ಟದ ಆಂಜನೇಯ ಮತ್ತು ಕಾತ್ಯಾಯಿನಿಗೆ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿ

ಶಿಡ್ಲಘಟ್ಟದ ಆಂಜನೇಯ ಮತ್ತು ಕಾತ್ಯಾಯಿನಿಗೆ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿ

0
Sidlaghatta Best Government Employee Award

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರತಿ ವರ್ಷ ಏಪ್ರಿಲ್ 21 ರಂದು ಪ್ರತಿವರ್ಷವೂ ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ ನೌಕರರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಈ ವರ್ಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏಪ್ರಿಲ್ 21 ರಂದು ಬೆಳಿಗ್ಗೆ 9.30ಕ್ಕೆ, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ 1ನೇ ಮಹಡಿಯ ಆಡಿಟೋರಿಯಂನಲ್ಲಿ ನಡೆಯಲಿದೆ.

ಆಂಜನೇಯ ಅವರು ಶಿಡ್ಲಘಟ್ಟದ ಮುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ, ತಾಲ್ಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ, ಹಾಗೂ ಜಿಲ್ಲೆಯಲ್ಲಿ ಅಕ್ಷರದಾಸೋಹ ಮತ್ತು ವಯಸ್ಕರ ಶಿಕ್ಷಣಾಧಿಕಾರಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ.

ಕಾತ್ಯಾಯಿನಿ ಅವರು ಆನೂರು ಮತ್ತು ಜೆ.ವೆಂಕಟಾಪುರ ಗ್ರಾಮಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಯಾಗಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ವಿಶೇಷ ಗಮನ ನೀಡಿ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ.

ಈ ಪ್ರಶಸ್ತಿ ಅವರು ನೀಡುತ್ತಿರುವ ಸೇವೆಗಳಿಗೂ, ಪರಿಶ್ರಮಕ್ಕೂ ಒಲಿದ ಗೌರವವಾಗಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version