Sidlaghatta : ರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದಿಂದ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಹನುಮಂತಪುರ ಗೇಟ್ ನ ಬಿಜಿಎಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರ್.ಚಾತುರ್ಯ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ. ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಹಾಗೂ ವಿದ್ಯಾರ್ಥಿ ಕಲ್ಯಾಣ ವಿಭಾಗದ ಆಶ್ರಯದಲ್ಲಿ ಧಾರವಾಡದ ಸುವರ್ಣ ಶತಮಾನೋತ್ಸವ ಭವನದಲ್ಲಿ ನಡೆದ ಪದವಿ ಪೂರ್ವ ವಿಭಾಗದ ರಾಜ್ಯ ಮಟ್ಟದ ಚರ್ಚಾ ಸ್ಫರ್ಧೆಯಲ್ಲಿ ಆರ್.ಚಾತುರ್ಯ ಪ್ರಥಮ ಸ್ಥಾನ ಪಡೆದಿದ್ದಾಳೆ.
“ಗ್ರಾಮೀಣಾಭಿವೃದ್ದಿಯಲ್ಲಿ ಸಹಕಾರ ಸಂಘಗಳು ಮಾತ್ರವೇ ಪರಿಣಾಮಕಾರಿ ಪಾತ್ರ ವಹಿಸಬಲ್ಲವು” ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶಿಡ್ಲಘಟ್ಟ ನಗರದ ನಗರ್ತಪೇಟೆಯ ವಾಸಿ ರಾಘವೇಂದ್ರ(ರಘು) ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಚಾತುರ್ಯಳನ್ನು ಕಾಲೇಜು ಆಡಳಿತ ಮಂಡಳಿ, ಸಂಘ ಸಂಸ್ಥೆಗಳಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದಿಂದ ಕಳೆದ ತಿಂಗಳು ಪ್ರತಿ ಜಿಲ್ಲೆಯಲ್ಲೂ ಚರ್ಚಾ ಸ್ಪರ್ಧೆಯನ್ನು ನಡೆಸಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಧಾರವಾಡದಲ್ಲಿ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.