Sidlaghatta : ಶಿಡ್ಲಘಟ್ಟ ನಗರದ ಉಲ್ಲೂರುಪೇಟೆಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ಭಾವನಾ ಮಹರ್ಷಿ ಜಯಂತ್ಯುತ್ಸವದ ಅಂಗವಾಗಿ ಶ್ರೀ ಭಾವನಾ ಮಹರ್ಷಿ ಮತ್ತು ಭದ್ರಾವತಿ ದೇವಿಯ ಪೂಜೆ, ಗಂಗಾಪೂಜೆ, ಕಳಶಸ್ಥಾಪನೆ, ಭಾವನಾ ಮಹರ್ಷಿ ಮತ್ತು ಭದ್ರಾವತಿ ದೇವಿಯ ಕಲ್ಯಾಣೋತ್ಸವ, ಲಾಜಾ ಹೋಮ, ವಿಶೇಷ ಪೂಜೆಯನ್ನು ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು.
ವೀರಾಂಜನೇಯಸ್ವಾಮಿ, ಭದ್ರಾವತಿ ಹಾಗೂ ಭಾವನಾ ಮಹರ್ಷಿಗಳ ಉತ್ಸವ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು ವಿಶೇಷ ಪೂಜೆ, ಮಹಾಮಂಗಳಾರತಿಯನ್ನು ಮಾಡಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
“ನೇಕಾರ ಕುಲದೈವ ಮತ್ತು ಆಧಾರ ಪುರುಷರಾದ ಶ್ರೀ ಭಾವನಾ ಮಹರ್ಷಿ ಅವರನ್ನು ಪೂಜಿಸುವ ಮೂಲಕ ಲೋಕಕಲ್ಯಾಣ ಮತ್ತು ನೇಕಾರ ಸಮಾಜದ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ” ಎಂದು ತಾಲ್ಲೂಕು ಪದ್ಮಶಾಲಿ ಸಂಘದ ಅಧ್ಯಕ್ಷ ನಾಗರಾಜ್ ತಿಳಿಸಿದರು.
ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್, ತಾಲ್ಲೂಕು ಪದ್ಮಶಾಲಿ ಸಂಘದ ಅಧ್ಯಕ್ಷ ನಾಗರಾಜ್, ಬಿ.ಲಕ್ಷ್ಮೀನಾರಾಯಣಪ್ಪ, ಪುರುಷೋತ್ತಮ್, ಎಸ್.ಕೆ.ನಾಗರಾಜ್, ಟಿ.ಲಕ್ಷ್ಮೀನಾರಾಯಣ, ಚಲಪತಿ, ತಾಲ್ಲೂಕು ಪದ್ಮಶಾಲಿ ಸಂಘ ಹಾಗೂ ಪದ್ಮಶಾಲಿ ಯುವಜನ ಸೇವಾ ಸಂಘದ ಸದಸ್ಯರು, ಅರ್ಚಕರಾದ ಬಿ.ಕೃಷ್ಣಮೂರ್ತಿ, ಅಕ್ಷಯ್ ಕುಮಾರ್ ಹಾಜರಿದ್ದರು.