Sidlaghatta : ಬಿಜೆಪಿ ಪಕ್ಷದ ಸದಸ್ಯತ್ವದ ಅಭಿಯಾನವನ್ನು ಸೆಪ್ಟೆಂಬರ್ 2 ರಂದು ಪ್ರಾರಂಭಿಸಿದ್ದು, ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯತ್ವವನ್ನು ಮಾಡಿಸಿದ್ದೇವೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ ತಿಳಿಸಿದರು.
ನಗರದ ಕೋಟೆ ವೃತ್ತದ ಬಳಿಯ ಶ್ರೀರಾಮರ ದೇವಸ್ಥಾನದ ಬಳಿ ಬಿಜೆಪಿ ಪಕ್ಷದ ಸದಸ್ಯತ್ವದ ಅಭಿಯಾನವನ್ನು ವಿವಿಧ ವಾರ್ಡುಗಳಲ್ಲಿ ನಡೆಸಲು ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಅಭಿವೃದ್ಧಿಗಾಗಿ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಭಾಗವಹಿಸಿ ಬಿಜೆಪಿ ಸದಸ್ಯರಾಗಿ ಮತ್ತು ಅಭಿವೃದ್ಧಿ ಹೊಂದಿದ ದೇಶ ನಿರ್ಮಿಸುವುದಕ್ಕೆ ಕೊಡುಗೆ ನೀಡಿ ಎಂದು ಕಾರ್ಯಕರ್ತರು ವಿವರಿಸಿದಾಗ ನಾಗರಿಕರು ಸ್ವಯಂ ಆಸಕ್ತಿ ವಹಿಸಿ ಸದಸ್ಯರಾಗುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಮಾಡುವ ಮೂಲಕ ದೇಶದ ಅಭಿವೃದ್ಧಿ ಹಾಗೂ ಬಿಜೆಪಿ ಪಕ್ಷವನ್ನು ಬಲಪಡಿಸುವ ಉದ್ದೇಶ ಹೊಂದಿದ್ದೇವೆ ಎಂದರು.
ಹಿಂದೆಲ್ಲ ಸದಸ್ಯತಾ ಅಭಿಯಾನಗಳು ಆಫ್‍ಲೈನ್ ಮುಖಾಂತರ ನಡೆಸಲಾಗುತ್ತಿತ್ತು. ಕಾಲಕ್ಕೆ ತಕ್ಕಂತೆ ಬಿಜೆಪಿ ಪಕ್ಷವು ಆಧುನಿಕತೆಗೆ ಮಾರ್ಪಾಡು ಹೊಂದಿದ್ದು, ಆನ್‍ಲೈನ್ ಮುಖಾಂತರ ಪಕ್ಷದ ಸದಸ್ಯತ್ವ ನೋಂದಣಿಗೆ ಮುಂದಾಗಿದೆ. ದೂರವಾಣಿ 8800002024 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಸದಸ್ಯತ್ವ ಪಡೆಯಬಹುದು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಪಕ್ಷದ ಸದಸ್ಯರಾಗಲು ಅರ್ಹತೆ ಹೊಂದಿದ್ದೀರಿಂದ ಲಿಂಗ, ಜಾತಿ, ಧರ್ಮ ಯಾವುದೇ ಬೇಧವಿಲ್ಲದೇ ಪ್ರತಿಯೊಬ್ಬರನ್ನು ಪಕ್ಷದ ಸದಸ್ಯರನ್ನಾಗಿಸಲು ಮುಂದಾಗಬೇಕು ಎಂದರು.
ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ. ನರೇಶ್, ಪ್ರಧಾನ ಕಾರ್ಯದರ್ಶಿಗಳಾದ ಮೋಹನ್, ನಾಗೇಶ್, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಮಂಜುಳ, ಪುರುಷೋತ್ತಮ, ಚೆಲುವರಾಜು, ವೆಂಕಟೇಶ್, ಪ್ರತಾಪ್ ಹಾಜರಿದ್ದರು.