Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಮಾದೇವಮ್ಮ ಹಾಗೂ ಉಪಾಧ್ಯಕ್ಷರಾಗಿ ಎನ್.ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯ ಹಿಂದಿನ ಅಧ್ಯಕ್ಷ, ಉಪಾಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸೋಮವಾರ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು ನಿಗದಿಯಾಗಿತ್ತು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಆರ್.ರವಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಮಾಜಿ ಅಧ್ಯಕ್ಷೆ ಸರಸ್ವತಿ.ಡಿ.ಎಂ, ಮಾಜಿ ಉಪಾಧ್ಯಕ್ಷೆ ಅಮೃತ.ಎನ್. ಸದಸ್ಯರಾದ ನಾಗರಾಜ್, ರಾಜಪ್ಪ, ಸುಮಿತ್ರ ಮಂಜುನಾಥ್, ಶ್ರೀನಿವಾಸ್, ಪಿಡಿಓ ತನ್ವೀರ್‌ಅಹಮ್ಮದ್ ಹಾಜರಿದ್ದರು.