
ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟದ ಬಳಿ ಸೋಮವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಅರಣ್ಯ ಇಲಾಖೆಯ ಸಿಬ್ಬಂದಿ ಮಂಗಳವಾರ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ಹಿಡಿಯಲು ಬೋನನ್ನ ಇರಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಚಿರತೆ ಕಾಣಿಸಿಕೊಂಡ ಸ್ಥಳದ ಹತ್ತಿರ ಇಂದು ಒಂದು ಬೋನು ಇಡಲಾಗಿದ್ದು, ಬುಧವಾರ ಮತ್ತೊಂದು ಬೋನನ್ನು ಚಿಂತಾಮಣಿಯಿಂದ ತರಿಸಿ ಇಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.