Sidlaghatta : ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆ.ಸಹನಾರಾಜೀವ್‌ಗೌಡ ಹಾಗೂ ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅನುಪಲ್ಲಿ ಕೃಷ್ಣಾರೆಡ್ಡಿ ಅವರನ್ನು ನೇಮಿಸಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಈ ತಕ್ಷಣದಿಂದಲೆ ಜಾರಿಗೆ ಬರುವಂತೆ ಇವರನ್ನು ನೇಮಕ ಮಾಡಿದ್ದು ಜಿಲ್ಲಾ ಸಮಿತಿ ಹಾಗೂ ಸ್ಥಳೀಯ ನಾಯಕರ ಜತೆಗೂಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.