Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ (Government Hospital) ಬುಧವಾರ ಆಯೋಜಿಸಲಾಗಿದ್ದ CMC ಪೌರಕಾರ್ಮಿಕ ಸಿಬ್ಬಂದಿ ವರ್ಗದವರಿಗೆ Master Health Camp ನ್ನು ಉದ್ಘಾಟಿಸಿ ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿದರು.
ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ನಗರದ ನಾಗರಿಕರು ಆರೋಗ್ಯದಿಂದಿರಲು ಸಾಧ್ಯ. ಪ್ರತಿನಿತ್ಯ ನಗರದ ಸ್ವಚ್ಚತೆ ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಹೇಳಿದರು.
ಪ್ರತಿಯೊಬ್ಬ ಪೌರಕಾರ್ಮಿಕರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ನಗರದ ನಗರಸಭೆಯಲ್ಲಿ ಒಟ್ಟು 72 ಮಂದಿ ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು ಈ ಪೈಕಿ 68 ಮಂದಿ ಪೌರ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸಿ.ಎಂ.ಸುಮಿತ್ರಾರಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ವೈದ್ಯಾಧಿಕಾರಿ ಡಾ.ವಾಣಿ, ಡಾ.ಮನೋಹರ್, ಡಾ.ಭಾವನಾ, ಡಾ.ಸುಗುಣ, ಪೌರಸೇವಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಮುರಳಿ ಹಾಜರಿದ್ದರು.