Sidlaghatta : ರಾಜ್ಯದ ಬೆಳಗಾವಿಯಲ್ಲಿ 1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ Congress ಅಧಿವೇಶನಕ್ಕೆ ಈಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕ್ಕೆ ನಗರದ ಪ್ರಮುಖ ಬೀದಿಗಳಲ್ಲಿ “ಗಾಂಧಿ ನಡೆ” ಮೂಲಕ ಸಮಾನತೆ ಮತ್ತು ಶ್ರಮದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಉದಯಶಂಕರ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬುಧವಾರ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, “ಗಾಂಧಿ ನಡೆ” ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗಾಂಧೀಜಿ ಅಹಿಂಸೆಯ ಮೂಲಕವೇ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕು ಮತ್ತು ಹೋರಾಟ ನಮಗೆಲ್ಲರಿಗೂ ಮಾದರಿ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ ಮಾತನಾಡಿ, “ನನ್ನ ಜೀವನವೇ ನನ್ನ ಸಂದೇಶ” ಎಂದಿದ್ದ ಮಹಾತ್ಮ ಗಾಂಧಿ ಒಂದು ಶಕ್ತಿ. ತಮ್ಮ ಜೀವನದುದ್ದಕ್ಕೂ ಸತ್ಯ, ಸಮಾನತೆ, ಶಾಂತಿ, ಅಹಿಂಸೆ, ಜಾತ್ಯಾತೀತತೆ, ಅಸ್ಪೃಶ್ಯತೆ ನಿವಾರಣೆ, ಶ್ರಮದಾನ, ಸ್ವಚ್ಛತೆಯ ಮಹತ್ವವನ್ನೇ ಉಸಿರಾಡಿದ್ದ ಮಹಾತ್ಮ ಸ್ವಾತಂತ್ರ್ಯಕ್ಕಾಗಿ ಸವೆಸಿದ ಹಾದಿ ಇಂದಿನ ಪೀಳಿಗೆಗೆ ಆದರ್ಶ.
ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ದೂರದೃಷ್ಟಿತ್ವ ಮತ್ತು ಮಾರ್ಗದರ್ಶನ ನೀಡಿ ಸ್ವಾವಲಂಬಿ ರಾಷ್ಟ್ರದ ಕನಸನ್ನು ಪ್ರತಿಪಾದಿಸಿದ್ದರು ಎಂದು ಹೇಳಿದರು.
KPCC ಕೋಆರ್ಡಿನೇಟರ್ ರಾಜೀವ್ ಗೌಡ, ಜಿಲ್ಲಾ ಕಾಂಗ್ರೆಸ್ ಘಾಟಕದ ಮಹಿಳಾ ಅಧ್ಯಕ್ಷೆ ಯಾಸ್ಮಿನ್ ತಾಜ್, ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು, ಟಿ.ಕೆ.ನಟರಾಜ್, ಭಕ್ತರಹಳ್ಳಿ ಮುನೇಗೌಡ, ಗುಡಿಯಪ್ಪ, ಎ.ನಾಗರಾಜ್, ಮುನೀಂದ್ರ, ಗೋವಿಂದರಾಜು ಹಾಜರಿದ್ದರು.