Sidlaghatta : ಅಡುಗೆ ಗ್ಯಾಸಿನ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರ ಬದುಕಿಗೆ ಮತ್ತೊಂದು ಹೊರೆ ನೀಡಿದಂತಾಗಿದೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕ ರಾಜೀವ್ ಗೌಡ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಬಸ್‌ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳಿದರು. ಅವರನ್ನು ಉದ್ದೇಶಿಸಿ ಮುನೀಂದ್ರ ಮಾತನಾಡಿದರು.
“ಡೀಸೆಲ್, ಪೆಟ್ರೋಲ್, ಗ್ಯಾಸ್ ಎಲ್ಲದರ ಬೆಲೆ ಹೆಚ್ಚಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಇದರ ಪರಿಣಾಮ ತೀವ್ರವಾಗಿ ಬಡ ಕುಟುಂಬಗಳ ಮೇಲೆ ಬೀರುತ್ತಿದೆ,” ಎಂದರು.
ಜನರ ಭವಿಷ್ಯಕ್ಕಾಗಿ ಕೇಂದ್ರ ಸರ್ಕಾರವು ಗ್ಯಾಸಿನ ಬೆಲೆ ಹೆಚ್ಚಳವನ್ನು ತಕ್ಷಣವೇ ಹಿಂತಿರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ಶಿಡ್ಲಘಟ್ಟ ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಬಸ್‌ಗಳಲ್ಲಿ ಪ್ರಯಾಣಿಸಿ ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿಶ್ ಶ್ರೀನಾಥ್, ಎಂ. ರಾಮಾಂಜಿನಪ್ಪ, ಗಾಯತ್ರಮ್ಮ, ನಾಗರಾಜ್ ಸೇರಿದಂತೆ ಹಲವರು ಹಾಜರಿದ್ದರು.