Sidlaghatta : ನಗರದಲ್ಲಿ ಬುಧವಾರ ಕಾಂಗ್ರೆಸ್ (Congress) ಪಕ್ಷದಿಂದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡ ವಕೀಲೆ ಯಾಸ್ಮೀನ್ ತಾಜ್ (Yasmeen Taj) ಅವರಿಗೆ ನೇಮಕಾತಿ ಪತ್ರವನ್ನು ನೀಡಿ ಶಾಸಕ ವಿ.ಮುನಿಯಪ್ಪ (V Muniyappa) ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಮಹಿಳೆಯರನ್ನು ಪಕ್ಷದತ್ತ ಸೆಳೆದು ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ನಿಸ್ವಾರ್ಥವಾಗಿ ದುಡಿಯುವ ಕಾರ್ಯಕರ್ತರೇ ಬಹು ದೊಡ್ಡ ಆಸ್ತಿ. ಅಂತಹ ಕಾರ್ಯಕರ್ತರನ್ನು ಪಕ್ಷವು ಗುರುತಿಸಿ ಜವಾಬ್ದಾರಿ ಹೊರಿಸುತ್ತದೆ. ಪಕ್ಷವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡಬೇಕೆಂದು ಅವರು ಹೇಳಿದರು.
ವಕೀಲೆ ಯಾಸ್ಮೀನ್ ತಾಜ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಪಕ್ಷ ಸಂಘಟನೆ ಮಾಡಲೆಂದು ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.