ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕೆ ಕಾರ್ಯಕ್ರಮದ ಉದ್ಘಾಟನೆ ನೆರವೆರಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಯಮನಪ್ಪ ಕರೆ ಹನುಮಂತಪ್ಪ ಮಾತನಾಡಿದರು.
ಕೋವ್ಯಾಕ್ಸಿನ್ ಲಸಿಕೆ ಹಾಕಿಕೊಳ್ಳುವುದು ತುಂಬಾ ಅಗತ್ಯವಾಗಿದೆ, ಇದೀಗ ಮೂರನೇ ಅಲೆ ಪ್ರಾರಂಭವಾಗುವ ಸೂಚನೆಯಿದ್ದು ವಿದ್ಯಾರ್ಥಿಗಳು ಭಯಪಡದೇ ವ್ಯಾಕ್ಸಿನ್ ಹಾಕಿಸಿಕೊಳ್ಳುವ ಜೊತೆಗೆ ತಮ್ಮ ಸುತ್ತಮುತ್ತಲಿನವರೆಗೂ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಹಾಗೂ ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ಮಾತನಾಡಿ ತಾಲ್ಲೂಕಿನಾದ್ಯಂತ ಈ ಹಿಂದೆ ಕೋವ್ಯಾಕ್ಸಿನ್ ಲಸಿಕೆ ಹೆಚ್ಚಾಗಿ ಹಾಕಲಾಗಿದ್ದು ನಾವು ನಮ್ಮ ಗುರಿ ಮುಟ್ಟಿದ್ದೇವೆ. ಇದರಿಂದ ಯಾವುದೇ ಆರೋಗ್ಯದ ಸಮಸ್ಯೆಯಿರುವುದಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೈರ್ಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ ಪಚ್ಚಾಪುರೆ, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ಪ್ರಾಂಸುಪಾಲ ಲಕ್ಷö್ಮಯ್ಯ, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಎಚ್.ಸಿ.ಮುನಿರಾಜು ಮತ್ತಿತರರು ಹಾಜರಿದ್ದರು.