ಶಿಡ್ಲಘಟ್ಟ ನಗರದಲ್ಲಿನ ಲಸಿಕಾ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ನಾವು ಮೊದಲನೇ ಡೋಸ್ ನೀಡಿಕೆಯಲ್ಲಿ ಶೇ 78 ರಷ್ಟು ಸಾಧನೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲೆಯಾದ್ಯಂತ ಶುಕ್ರವಾರ ಮೆಗಾ ಲಸಿಕೋತ್ಸವ ನಡೆಯುತ್ತಿದ್ದು ಒಂದೆ ದಿನ 70 ಸಾವಿರ ಮಂದಿಗೆ ಲಸಿಕೆಯನ್ನು ಹಾಕುವ ಗುರಿಯನ್ನು ಹಾಕಿಕೊಂಡಿದ್ದು ಅದಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಗುರಿಯನ್ನು ಮುಟ್ಟುವ ಆಶಾಭಾವನೆ ವ್ಯಕ್ತಪಡಿಸಿ, ಅದಕ್ಕೆ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.
ಶೇ 70 ರಷ್ಟು ಗುರಿ ದಾಟಿದ ಮೇಲೆ ಲಸಿಕೆ ಹಾಕಿಸಿಕೊಳ್ಳುವ ವೇಗ ಕುಂಠಿತಗೊಳ್ಳುವುದು ಸಹಜ. ಆದರೂ ನಮ್ಮ ಅಧಿಕಾರಿಗಳು ಮನೆ ಮನೆಗೂ ಭೇಟಿ ನೀಡಿ ಅವರ ಮನವೊಲಿಕೆ ಮಾಡಿ ಮೊದಲ ಹಾಗೂ ಎರಡನೇ ಡೋಸ್ ನೀಡುವಲ್ಲಿ ಗುರಿ ಮುಟ್ಟುವತ್ತ ಸಾಗಿದ್ದೇವೆ ಎಂದು ಹೇಳಿದರು.
ದೇಶವನ್ನು ಕೊರೊನಾ ಮುಕ್ತವಾಗಿಸುವಲ್ಲಿ ಎಲ್ಲರೂ ಸಂಘಟಿತರಾಗಿ ಕಾರ‍್ಯನಿರ್ವಹಿಸಬೇಕಿದೆ. ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಸಹ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ತಹಶೀಲ್ದಾರ್ ಬಿ.ಎಸ್.ರಾಜೀವ್, ನಗರಸಭೆ ಆಯುಕ್ತ ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಆರೋಗ್ಯ ಇಲಾಖೆಯ ದೇವರಾಜ್, ಶೋಭ, ಅಂಗನವಾಡಿ ಕಾರ‍್ಯಕರ್ತೆಯರಾದ ನವನೀತ, ನಾಗವೇಣಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi