ಶಿಡ್ಲಘಟ್ಟ ನಗರದ ಹನ್ನೊಂದನೇ ವಾರ್ಡಿನ ಕುಂಬಾರಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಕೋವಿಡ್ ಲಸಿಕಾ ಆಂದೋಲನಕ್ಕೆ ಚಾಲನೆ ನೀಡಿ ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 18 ವರ್ಷ ಮೇಲ್ಪಟ್ಟವರು ಶೇ 53 ರಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಲಸಿಕೆ ಹಾಕಿಸಿರುವ ಕಾರಣ ಪ್ರತಿಯೊಂದು ವಾರ್ಡುಗಳಲ್ಲೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲಸಿಕೆ ಆಂದೋಲನವನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.
ತಾಲ್ಲೂಕನ್ನು ಕೊರೊನಾ ಮುಕ್ತವನ್ನಾಗಿಸಲು ಪ್ರತಿಯೊಬ್ಬರೂ ತಾಲ್ಲೂಕು ಆಡಳಿತಕ್ಕೆ ಸಹಕಾರ ನೀಡಬೇಕು. ಕನಿಷ್ಠ ಹತ್ತು ಸಾವಿರ ಮಂದಿಗೆ ಲಸಿಕೆ ಹಾಕಿಸುವ ಗುರಿಯನ್ನಿಂದು ನಾವು ಹೊಂದಿದ್ದೇವೆ. ತಮ್ಮ ಕುಟುಂಬದವರು, ಅಕ್ಕಪಕ್ಕದವರು ಯಾರೇ ಲಸಿಕೆ ಹಾಕಿಸಿರದಿದ್ದರೂ ಕರೆದುಕೊಂಡು ಬಂದು ಹಾಕಿಸಿ. ಇದು ಎಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಬದಲಿಗೆ ಕೊರೊನಾ ಹಿಮ್ಮೆಟ್ಟಿಸಲು ಅದು ಅಸ್ತ್ರವಾಗಿದೆ. ಆದ್ದರಿಂದ ಜನತೆ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಲಸಿಕೆ ಪಡೆದ ನಂತರ ಉದಾಸೀನ ಮಾಡದೇ ಕೊರೊನಾ ಮಾರ್ಗಸೂಚಿಗಳನ್ನೂ ತಪ್ಪದೆ ಪಾಲಿಸಬೇಕು. ಕೋವಿಡ್ ಮಹಾಮಾರಿಯ ಹಾವಳಿಯಿಂದಾಗಿ ಇದೀ ವಿಶ್ವವೇ ತತ್ತರಿಸಿದೆ. ಜನರು ಎಚ್ಚೆತ್ತುಕೊಳ್ಳಬೇಕು, ಸದೃಢ ರಾಷ್ಟ್ರವಾಗಲು ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯಬೇಕು ಎಂದು ಹೇಳಿದರು.
ಕಳೆದ ಹತ್ತು ದಿನಗಳಿಂದ ಯಾವುದೇ ಕೊರೊನಾ ಪ್ರಕರಣ ತಾಲ್ಲೂಕಿನಲ್ಲಿ ದಾಖಲೆಯಾಗಿಲ್ಲ. ಇದೇ ರೀತಿ ತಾಲ್ಲೂಕಿನ ಜನತೆ ಸಹಕಾರ ನೀಡಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಶ್ರೀಕಾಂತ್, ನಗರಸಭೆ ಸದಸ್ಯ ಎಲ್.ಅನಿಲ್ ಕುಮಾರ್, ಆರೋಗ್ಯ ನಿರೀಕ್ಷಕಿ ಶೋಭಾ, ಮುರಳಿ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi