
Devaramallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಪವಿತ್ರ ಅವರು ಜಯಶಾಲಿಯಾಗಿದ್ದಾರೆ.
ಒಟ್ಟು 16 ಸದಸ್ಯ ಬಲವಿರುವ ದೇವರಮಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು ಆಗಿದ್ದು, ಶುಕ್ರವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಹಿನ್ನಲೆಯಲ್ಲಿ ಜೆಡಿಎಸ್ ಬೆಂಬಲಿತ ಪವಿತ್ರ ಮತ್ತು ಕಾಂಗ್ರೆಸ್ ಬೆಂಬಲಿತ ಸುಗುಣಮ್ಮ ನಾಮಪತ್ರ ಸಲ್ಲಿಸಿದ್ದರು.
ಚುನಾವಣೆಯಲ್ಲಿ ಪವಿತ್ರ ಅವರು 9 ಮತಗಳನ್ನು ಪಡೆದರೆ, ಸುಗುಣಮ್ಮ 7 ಮತಗಳನ್ನೇ ಪಡೆದು ಸೋಲು ಕಂಡರು. ಈ ಹಿನ್ನೆಲೆಯಲ್ಲಿ ಪವಿತ್ರ ಅವರನ್ನು ಚುನಾವಣೆ ಅಧಿಕಾರಿಯಾದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಅಧ್ಯಕ್ಷರಾಗಿ ಘೋಷಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸುಧಾಮಣಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.