ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶಿಡ್ಲಘಟ್ಟ ತಾಲ್ಲೂಕು ದಿಬ್ಬೂರಹಳ್ಳಿ ಗ್ರಾಮದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಅಂಗಡಿ ಮುಂಗಟ್ಟುಗಳು, ಬೇಕರಿ, ಹೋಟೆಲ್ ಟೀ ಸ್ಟಾಲ್ ಮಾಲೀಕರಿಗೆ ದಂಡ ವಿಧಿಸಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಮಂಜುನಾಥ್, ತಾಲ್ಲೂಕು ಆರೋಗ್ಯ ನಿರೀಕ್ಷಕರಾದ ಎಂ ಎಸ್ ದೇವರಾಜ್, ಕೀರ್ತಿ, ಆರಕ್ಷಕ ಮೂರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ಯ ಆಶಾ ಕಾರ್ಯಕರ್ತೆಯರು ಹಾಜರಿದ್ದರು.