Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿ, ಹಾಗೂ ಪೋಷಕರು ಸಾಮೂಹಿಕ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಿದರು.
‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಸಂಸ್ಥೆಯ ಅಧ್ಯಕ್ಷರಾದ ಎ ನಾಗರಾಜ್, ಪ್ರತಿದಿನ ಯೋಗ ಮಾಡಿ ಉತ್ತಮ ಆರೋಗ್ಯವನ್ನು ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯ ವೈದ್ಯ ಶ್ರೀ ವಿಜಯಕುಮಾರ್ ಮಾತನಾಡಿ ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗಭ್ಯಾಸ ಅತ್ಯಂತ ಅವಶ್ಯಕ, ಇದರಿಂದ ಮಕ್ಕಳಲ್ಲಿ ಏಕಾಗ್ರತೆ,ಬೆಳೆಯುವುದರ ಜೊತೆಗೆ ಪೀಳಿಗೆಯನ್ನು ಉತ್ತಮ ದಾರಿಯಲ್ಲಿ ಅಭಿವೃದ್ಧಿ ಹೊಂದುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.
ಸಿಬಿಎಸ್‌ಸಿ ವಿಭಾಗದ ಪ್ರಾಂಶುಪಾಲರು ಆದ ಶ್ರೀ ಮುನಿಕೃಷ್ಣಪ್ಪ ಆಸನಗಳನ್ನು ಮಾಡುವ ಕ್ರಮ ಮತ್ತು ಅದರ ಉಪಯೋಗಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಶೋಕ್ಆ, ಆಡಳಿತ ಅಧಿಕಾರಿ ಶ್ರೀಮತಿ ಚಂದನ ಅಶೋಕ್, ದೈಹಿಕ ಶಿಕ್ಷಕ ಭರತ್ ಗೌಡ, ಪಿ ಯು ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ನೂರ್ ಜಾನ್ ಬೇಗಂ, ಶಿಕ್ಷಕರಾದ ಶ್ರೀ ರಾಮಾಂಜಿ, ಶ್ರೀಮತಿ ದೀಪ ಎಲ್ ಹಾಗೂ ಸಂಸ್ಥೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.