Goramadagu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಗೊರಮಡುಗು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನಿವೀರಪ್ಪ ಹಾಗೂ ಉಪಾಧ್ಯಕ್ಷರಾಗಿ ಎಲ್.ಓಬಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 12 ಸಂಖ್ಯಾ ಬಲವಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಚುನಾವಣೆ ಭಾನುವಾರ ನಡೆಯಿತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಯಾಗಿ ಭಾಸ್ಕರರೆಡ್ಡಿ ಕಾರ್ಯನಿರ್ವಹಿಸಿದರು.