ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವನ್ನಾಗಿಸುತ್ತದೆ. ಸರ್ಕಾರಿ ನೌಕರರು ತಮ್ಮ ಮಾನಸಿಕ ಒತ್ತಡವನ್ನು ನಿವಾರಿಸಿಕೊಳ್ಳಲು ದಿನದ ಒಂದು ಗಂಟೆಯಾದರೂ ವ್ಯಾಯಾಮ, ದೈಹಿಕ ಚಟುವಟಿಕೆಗಳಿಗಾಗಿ ಮೀಸಲಿಡಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಜಿಲ್ಲಾಧ್ಯಕ್ಷ ಹರೀಶ್, ಪ್ರಾಥಮಿಕ ಸಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಶಿರಸ್ತೇದಾರ್ ಕೆ.ಎಂ.ಮಂಜುನಾಥ್, ದೈಹಿಕ ಶಿಕ್ಷಕರ ಸಂಘದ ರಂಗನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರಿಡಾಕೂಟದಲ್ಲಿ ಭಾಗವಹಿಸಿದ್ದರು.