ಏಪ್ರಿಲ್ 15 ರವರೆಗೆ ತಾಲ್ಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಂಡು ಮಹಾತ್ಮ ಗಾಂಧೀಜಿಯವರ ಕನಸಾಗಿರುವ ಸ್ವಚ್ಛ ಭಾರತ ಗುರಿ ತಲುಪಲು ಆರೋಗ್ಯ ಇಲಾಖೆಯು ಸಹಿತ ಈ ದಿಶೆಯಲ್ಲಿ ಭಾಗಿಯಾಗುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.
ಸ್ವಚ್ಛತಾ ಪಾಕ್ಷಿಕ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವರು ಮಾತನಾಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ವಾರದಲ್ಲಿ 2ಗಂಟೆ ತಮ್ಮ ಸುತ್ತಲಿನ ಸ್ವಚ್ಛತೆಗೆ ಸಮಯವನ್ನು ಮೀಸಲಿಟ್ಟಿದ್ದೇವೆ. ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ಸುತ್ತ ಮುತ್ತಲಿದ ಪರಿಸರವನ್ನು ಸ್ವಚ್ಛತೆಯಿಂದ ಇರಿಸಿಕೊಳ್ಳುವುದರಿಂದ ಪ್ರತಿಯೊಬ್ಬರ ಆರೋಗ್ಯ ಉತ್ತಮವಾಗಿ ಇರುತ್ತದೆ. ಆರೋಗ್ಯ ಕೇಂದ್ರದಲ್ಲಿ ಸ್ವಚ್ಚತೆಯನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಆಯುಷ್ಮನ್ ಭಾರತ್ ಆರೋಗ್ಯ ಕರ್ನಾಟಕ ಸ್ವಚ್ಛತಾ ಆಂದೋಲನವನ್ನು ಯಶಸ್ವಿಗೊಳಿಸಬೇಕಿದೆ. ಆಸ್ಪತ್ರೆಯ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕಿದ್ದು, ಎಲ್ಲರ ಸಹಕಾರ ಅಗತ್ಯವಾಗಿದೆ. ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರು ಆಸ್ಪತ್ರೆಯ ಆವರಣದಲ್ಲಿ ಯಾವುದೇ ಕಸವನ್ನು ಹಾಕದೆ ಕಸದ ಡಬ್ಬಿಯಲ್ಲಿ ಕಸ ಹಾಕುವ ಮೂಲಕ ಸ್ವಚ್ಛತೆಗೆ ಸಹಕರಿಸಬೇಕೆಂದರು.
ಈ ಸಂದರ್ಭದಲ್ಲಿ ಡಾ.ಸೋನಾಲಿ, ಡಾ. ರಾಘವೇಂದ್ರ, ಡಾ. ಗುರು, ಅಕ್ಕಲರೆಡ್ಡಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಲೋಕೇಶ್, ದೇವರಾಜು, ಸಿಬ್ಬಂದಿ ಲಲಿತಮ್ಮ, ಮುನಿರತ್ನಮ್ಮ, ಗೀತ, ನಂದಿನಿ, ಈದಾಯಿತ್, ಶಿವು, ಚೈತ್ರ, ಅಂಜದ್, ಅನಂತಮೂರ್ತಿ ಹಾಜರಿದ್ದರು.