Sidlaghatta : ಭಾನುವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆಯನ್ನು ನಡೆಸಲಾಯಿತು.
ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ ಮುಂಜಾನೆ ಕಾಕಡಾರತಿಯನ್ನು ಮಾಡಲಾಯಿತು. ಲಕ್ಷ್ಮೀನರಸಿಂಹಸ್ವಾಮಿ ಹೋಮ, ಸಾಯಿ ಹೋಮ, ಧನ್ವಂತರಿ ಹೋಮ ಮತ್ತು ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.
ದೇವಾಲಯವನ್ನು ಹಾಗೂ ದೇವರುಗಳನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಪ್ರಸಾದ ವಿನಿಯೋಗ ನಡೆಸಲಾಯಿತು. ಸಂಜೆ ಭಕ್ತಿಗೀತೆಗಳ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಸಾಯಿಮಂದಿರದಲ್ಲಿ ಗುರು ಪೂರ್ಣ ಮಿ ಅಂಗವಾಗಿ ಬೆಳಗ್ಗೆ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಸಲಾಯಿತು.