
H Cross, Sidlaghatta : ಶಿಡ್ಲಘಟ್ಟ ತಾಲ್ಲೂಕಿನ H Cross ಬಳಿಯ ಕುಂಬಿಗಾನಹಳ್ಳಿ ಗೇಟ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿ ಒಟ್ಟು 9 ಜನರು ಗಾಯಗೊಂಡಿದ್ದಾರೆ.
ವಿಜಯಪುರದಿಂದ ಎಚ್.ಕ್ರಾಸ್ ಕಡೆಗೆ ಬರುತ್ತಿದ್ದ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಕ್ಯಾಂಟರ್ ಮತ್ತು ಎಚ್.ಕ್ರಾಸ್‌ನಿಂದ ವಿಜಯಪುರ ಕಡೆಗೆ ಸಾಗುತ್ತಿದ್ದ ಆಂಧ್ರಪ್ರದೇಶ ನೋಂದಣಿಯ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, ಇರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಸ್ ಮತ್ತು ಕ್ಯಾಂಟರ್ ನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಬಸ್‌ನಲ್ಲಿ ಇದ್ದ ಏಳು ಮಂದಿ ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೇರಬ್ಬರ ಆಸ್ಪತ್ರೆಗೆ ದಾಖಲಿಸಲಾಗಿದೆ – ಕ್ಯಾಂಟರ್ ಚಾಲಕನನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ, ಬಸ್ ಚಾಲಕನನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ಹಾಗೂ ಕೆಲ ಪ್ರಯಾಣಿಕರನ್ನು ಹೊಸಕೋಟೆ ಸಿಲಿಕಾನ್ ಆಸ್ಪತ್ರೆ ಮತ್ತು ಶ್ರೀನಿವಾಸ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮಾಗಿ ರಸ್ತೆಯಲ್ಲಿ ಎರಡೂ ವಾಹನಗಳು ಅಡ್ಡ ಬಿದ್ದಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ನಂತರ ಸ್ಥಳೀಯರು ಮತ್ತು ಪೊಲೀಸರು ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಮಾರ್ಗವನ್ನು ಮುಕ್ತಗೊಳಿಸಿದರು.
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.