Sidlaghatta : ಶಿಡ್ಲಘಟ್ಟ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಬೆಳಗ್ಗೆ 10.30 ಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಆಯೋಜಿಸಲಾಗಿದೆ.
ಜನತಾದರ್ಶನದಲ್ಲಿ ಉಪವಿಭಾಗಾಧಿಕಾರಿ, ತಾಲ್ಲೂಕು ಪಂಚಾಯಿತಿ ಇಒ, ಪೊಲೀಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು, ನಗರಸಭೆ ಪೌರಾಯುಕ್ತ, ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಾಲ್ಲೂಕಿನ ಎಲ್ಲಾ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಸೂಕ್ತ ದಾಕಲೆಗಳೊಂದಿಗೆ ಅಹವಾಲು ನೀಡಬಹುದು. ತಕ್ಷಣವೇ ಅಧಿಕಾರಿಗಳ ಸಮ್ಮುಖದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಈ ಜನರ್ತಾದರ್ಶನದ ಸದುಪಯೋಗ ಮಾಡಿಕೊಳ್ಳುವಂತೆ ತಹಶೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದ್ದಾರೆ.