Sidlaghatta : ಕನಕ ಜಯಂತಿ ಅಂಗವಾಗಿ ಕುರುಬ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದು ಎಸ್.ಎಸ್.ಎಲ್.ಸಿ ಯಲ್ಲಿ ಶೇ 90 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕೆಂದು ಕುರುಬ ಸಂಘದ ಕಾರ್ಯದರ್ಶಿ ಎಂ.ರಾಮಾಂಜಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇದೆ ನ.18 ರಂದು ಸೋಮವಾರ ಕನಕ ಜಯಂತಿ ಆಚರಿಸಲಿದ್ದು ಅಂದು ಕಾರ್ಯಕ್ರಮದಲ್ಲಿ ಕುರುಬ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಎಸ್.ಎಸ್.ಎಲ್.ಸಿ ಯಲ್ಲಿ ಶೇ 90 ಕ್ಕಿಂತ ಹೆಚ್ಚು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು.
2023-24ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅಂಕ ಪಟ್ಟಿ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಸೈಜ್ ನ ಒಂದು ಭಾವ ಚಿತ್ರವನ್ನು ನ.16 ರೊಳಗೆ ಕುರುಬ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಸಲ್ಲಿಸಬೇಕೆಂದು ಅವರು ಕೋರಿದರು.
ತಡವಾಗಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ವಿವರಗಳಿಗೆ ಕೆ.ಮಂಜುನಾಥ್ ಅಧ್ಯಕ್ಷರು, ಮೊ.ಸಂಖ್ಯೆ 9448310784, ಕಾರ್ಯದರ್ಶಿ ಎಂ.ರಾಮಾಂಜಿನಪ್ಪ ಕಾರ್ಯದರ್ಶಿ 9880857814 ಗೆ ಸಂಪರ್ಕಿಸಲು ಅವರು ಮನವಿ ಮಾಡಿದರು.