Sidlaghatta : ವಿಶ್ವ ಹಾಲು ದಿನಾಚರಣೆ (World Milk Day) ಅಂಗವಾಗಿ ಬುಧವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ (Government Hospital) ಕೋಚಿಮುಲ್ (KOCHIMUL) ವತಿಯಿಂದ ಒಳರೋಗಿಗಳಿಗೆ ಹಾಲು ವಿತರಿಸಲಾಯಿತು.
“ಹಾಲು ಪೌಷ್ಟಿಕ ಆಹಾರವಾಗಿದ್ದು, ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಹಾಲು ಸರ್ವೋತ್ತಮ ಆಹಾರ ಎನ್ನುವ ಬಗ್ಗೆ ಜನಜಾಗೃತಿ ಮೂಡಿಸಲು ಈ ಕಾರ್ಯ ನಡೆಸಲಾಗುತ್ತಿದೆ. ಹಾಲಿನಲ್ಲಿ ಮನುಷ್ಯನ ದೇಹಕ್ಕೆ ಅತ್ಯಗತ್ಯವಾಗಿ ಬೇಕಾದ ಜೀವಸತ್ವಗಳು ಮಿಟಮಿನ್, ಪ್ರೋಟೀನ್ ಗಳಿವೆ. ಹಾಲು ವಿಟಮಿನ್ “ಡಿ”ಯಿಂದ ಶ್ರೀಮಂತವಾಗಿರುತ್ತದೆ. ಕ್ಯಾನ್ಸರ್ ಹತ್ತಿಕ್ಕುವ ಸಾಮರ್ಥ್ಯ ಹೊಂದಿರುವ ಸಂಗತಿಗಳಲ್ಲಿ ವಿಟಮಿನ್ ಡಿ ಸಹ ಒಂದು. ಹಾಲು ಒಕ್ಕೂಟದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ವಿತರಿಸಿ ಜನಜಾಗೃತಿ ಮೂಡಿಸುವ ಮೂಲಕ ಈ ದಿನ ವಿಶ್ವ ಹಾಲು ದಿನವನ್ನು ಆಚರಿಸುತ್ತಿದ್ದೇವೆ” ಎಂದು ಕೋಚಿಮುಲ್ ಉಪವ್ಯವಸ್ಥಾಪಕ ಎ.ವಿ.ಶಂಕರರೆಡ್ಡಿ ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ವಾಣಿ, ಆರೋಗ್ಯ ನಿರೀಕ್ಷಕ ದೇವರಾಜ್, ಕೋಚಿಮುಲ್ ಅಧಿಕಾರಿಗಳಾದ ಜಯಚಂದ್ರ, ಉಮೇಶ್ ರೆಡ್ಡಿ, ಶ್ರೀನಿವಾಸ್, ಡಾ.ಶಂಕರ್ ಕುಮಾರ್, ಗುಲಾಬ್ ಜಾನ್, ಮಂಜುನಾಥ, ವರಲಕ್ಷ್ಮಿ, ಕುಮ್ಮಣ್ಣ ಹಾಜರಿದ್ದರು.