Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಮೇಲೂರು ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಪ್ರತಿಭಾಕಾರಂಜಿಯನ್ನು ನಡೆಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಮಾತನಾಡಿ, ಮಕ್ಕಳಲ್ಲಿರುವ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರದರ್ಶನ ಮಾಡಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಇಲ್ಲಿ ವಿಜೇತರಾದ ಮಕ್ಕಳು ತಾಲ್ಲೂಕು ಹಂತ ಮತ್ತು ಜಿಲ್ಲಾ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿಸಿ ಶಾಲೆಗೆ ಕೀರ್ತಿ ತರಬೇಕೆಂದು ಹೇಳಿದರು.
1-4 ಮತ್ತು5-7 ತರಗತಿಗಳ ವಿಭಾಗಗಳಲ್ಲಿ ಕಂಠಪಾಠ, ಭಕ್ತಿ ಗೀತೆ, ದೇಶಭಕ್ತಿ ಗೀತೆ, ಛದ್ಮ ವೇಷ, ಚಿತ್ರಕಲೆ, ಕ್ಲೇ ಮಾಡಲಿಂಗ್, ಕಥೆ ಹೇಳುವುದು ಮೊದಲಾದ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ರಮೇಶ್, ಸದಸ್ಯರಾದ ಆರ್.ಎ.ಉಮೇಶ್, ಎಂ.ಜೆ.ಶ್ರೀನಿವಾಸ್, ಪಿ.ಡಿ.ಒ ಶಾರದ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಸಿ ಆರ್ ಪಿ ಶೀಲ, ಮುಖ್ಯ ಶಿಕ್ಷಕಿ ರುಕ್ಮಿಣಿಯಮ್ಮ, ಶಿಕ್ಷಕರಾದ ಆರ್ಯ, ಅರುಣ, ಚಾಂದ್ ಪಾಷ, ಸುಂದರಾಚಾರಿ, ಚಂದ್ರಶೇಖರ್, ಈಶ್ವರಮ್ಮ, ಗಾಯಿತ್ರಮ್ಮ ಹಾಜರಿದ್ದರು.