Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಪುರಾಣ ಪ್ರಸಿದ್ಧ ಗಂಗಾದೇವಿಗೆ ಶಿಡ್ಲಘಟ್ಟ ನಗರ ಮತ್ತು ಮಳ್ಳೂರಿನ ಹೆಣ್ಣುಮಕ್ಕಳು ಬುಧವಾರ ತಂಬಿಟ್ಟು ದೀಪಗಳನ್ನು ಹೊತ್ತು ತಂದು ವಿಶೇಷ ಪೂಜೆಯನ್ನು ನೆರವೇರಿಸಿದರು.
ಮಳ್ಳೂರು ಗ್ರಾಮದಿಂದ ಹೆಣ್ಣುಮಕ್ಕಳು ತಲೆಯಮೇಲೆ ಹೂಗಳಿಂದ ಅಲಂಕರಿಸಿರುವ ದೀಪಗಳನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ವಾದ್ಯವೃಂದದೊಡನೆ ಆಗಮಿಸಿದ್ದು ವಿಶೇಷವಾಗಿತ್ತು. ಮಳ್ಳೂರಿನಿಂದ ಮತ್ತು ಶಿಡ್ಲಘಟ್ಟದಿಂದ ಆಗಮಿಸಿದ್ದ ಭಕ್ತರಿಗೆ ಮೇಲೂರಿನ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಗತವನ್ನು ಕೋರಿ, ಮಜ್ಜಿಗೆ, ಪಾನಕ ಮತ್ತು ಹೆಸರುಬೇಳೆ ನೀಡಿ ಸತ್ಕರಿಸಿದುದು ಗ್ರಾಮಗಳ ನಡುವಿನ ಭಾವೈಕ್ಯತೆಯನ್ನು ಸಾರಿತು.