ನಗರದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಗರಸಭೆಯ ಅಧಿಕಾರಿಗಳು ಮಾಸ್ಕ್ ಧರಿಸದೇ ವಾಹನದಲ್ಲಿ ಸಂಚರಿಸುವವರನ್ನು ತಡೆದು ದಂಡ ವಿಧಿಸುತ್ತಿದ್ದಾರೆ.
ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಗರಸಭೆ ಸಿಬ್ಬಂದಿ ನಗರದ ಬಸ್ ನಿಲ್ದಾಣ ಸೇರಿದಂತೆ ವಿವಿಧ ಮುಖ್ಯರಸ್ತೆಗಳಲ್ಲಿ ಮಾಸ್ಕ್ ಹಾಕದೇ ಸಂಚರಿಸುವ ದ್ವಿಚಕ್ರವಾಹನ ಸವಾರರನ್ನು ತಡೆದು 100 ರೂ ದಂಡ ವಿಧಿಸುವ ಜೊತೆಗೆ ಕೊರೊನಾ ಬಗ್ಗೆ ಜನರಲ್ಲಿ ಮತ್ತಷ್ಟು ಅರಿವು ಮೂಡಿಸುತ್ತಿದ್ದಾರೆ.
ನಗರಸಭೆ ಪರಿಸರ ಎಂಜಿನಿಯರ್ ವೈಶಾಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜನರಿಗೆ ಕೊರೊನಾ ಬಗ್ಗೆ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ ಅನವಶ್ಯಕವಾಗಿ ಮಾಸ್ಕ್ ಧರಿಸದೇ ಜನತೆ ರಸ್ತೆಗಳಲ್ಲಿ ಓಡಾಡುವುದು, ಅಂತರ ಕಾಯ್ದುಕೊಳ್ಳದಿರುವುದರಿಂದ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ದಯವಿಟ್ಟು ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ರಸ್ತೆಗಿಳಿಯುತ್ತಿದ್ದಂತೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಹಾಕಿಕೊಳ್ಳಿ ಇದರಿಂದ ಕೊರೊನಾ ಹರಡದಂತೆ ತಡೆಗಟ್ಟಲು ಸಹಕಾರಿಯಾಗುತ್ತದೆ.
ನಾವು ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಗೆ. ಸೋಂಕು ಬರದಂತೆ ಕಾಪಾಡಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ಪೊಲೀಸ್, ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.