Sidlaghatta : ನಗರಸಭೆಯ ಆವರಣದಲ್ಲಿ ಶುಕ್ರವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರು, ನಗರಸಭೆಯ ಪೌರಕಾರ್ಮಿಕರು, ನಗರಸಭೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಡೆಂಗ್ಯೂ ಜ್ವರ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಾಗಿ ತಿಳಿಹೇಳಿದರು.
ವಾರ್ಡ್ ಗಳಲ್ಲಿ ಪ್ರತಿ ದಿನ ಟೈರುಗಳು , ತೆಂಗಿನ ಚುಪ್ಪು, ಘನ ತ್ಯಾಜ್ಯಗಳಾದ ಪ್ಲಾಸ್ಟಿಕ್ ಬಾಟಲ್, ಮಡಿಕೆಗಳು ಇತರೆ ಎಲ್ಲಾ ವಸ್ತುಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡುವಂತೆ ಮತ್ತು ಲಾರ್ವ ಸಮೀಕ್ಷೆ ಕಾರ್ಯದಲ್ಲಿ ಪ್ರತಿ ಶುಕ್ರವಾರ ಅವರೆಲ್ಲರೂ ಭಾಗವಹಿಸುವಂತೆ ತಿಳಿ ಹೇಳಿದರು.
ಆರೋಗ್ಯ ನಿರೀಕ್ಷಕ ದೇವರಾಜ್, ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.