ಈ ಭಾಗದ ರೈತರ ಕೃಷಿಗೆ ಆಸರೆಯಾಗಬೇಕಿದ್ದ ಮಳೆ ನೀರು ವ್ಯರ್ಥವಾಗಿ ಹೋಗುತ್ತಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ದಿವ್ಯ ನಿರ್ಲಕ್ಷವೇ ಕಾರಣ ಎಂದು ಯುವಶಕ್ತಿ ಸಂಘಟನೆಯ ರಾಜ್ಯ ಉಪಾಧ್ಯಕ್ಚ ವಿಜಯ ಭಾವರೆಡ್ಡಿ ಆರೋಪಿಸಿದ್ದಾರೆ.
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ಸಂಪೂರ್ಣ ಭರ್ತಿಯಾಗಿದ್ದ ನಲ್ಲೋಜನಹಳ್ಳಿ ಅಗ್ರಹಾರ ಕೆರೆಯ ಕಟ್ಟೆ ಒಡೆದು ನೀರು ಬೇರೆಡೆ ಹರಿಯುತ್ತಿದೆ. ಇದನ್ನೇ ನಂಬಿ ಜೀವನ ಸಾಗಿಸುತ್ತಿರುವ ಈ ಭಾಗದ ರೈತರು ಪದೇ ಪದೇ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದ್ದರೂ ಯಾವುದೇ ಅಧಿಕಾರಿಗಳು ಕೆರೆ ಕಟ್ಟೆಯನ್ನು ಸಮರ್ಪಕವಾಗಿ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ ಎಂದರು.
ನಲ್ಲೋಜನಹಳ್ಳಿ ಕೆರೆ ಸುಮಾರು 53 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು ಕಳೆದ ಆರು ವರ್ಷಗಳಲ್ಲಿ ಸುಮಾರು ಎರಡು ಕೋಟಿ ರೂಗಳ ವೆಚ್ಚದಲ್ಲಿ ನಾಲ್ಕು ಭಾರಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದ್ದ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಕಾಟಾಚಾರದ ಕಾಮಗಾರಿಯಂದ ಕಟ್ಟೆ ಪದೇ ಪದೇ ಒಡೆದು ಹೋಗುತ್ತಿದೆ.
ಸುಮಾರು 200 ಹೆಕ್ಟೇರ್ ಕೃಷಿ ಭೂಮಿ ಹೊಂದಿರುವ ಈ ಭಾಗದ ರೈತರು ಇದೇ ನೀರನ್ನು ಅವಲಂಬಿತರಾಗಿ ಕೃಷಿ ಮಾಡುತ್ತಾರೆ. ಕಟ್ಟೆ ಒಡೆದು ಕೆರೆ ನೀರು ಹೊರಗಡೆ ಹೋಗುತ್ತಿರುವುದು ರೈತರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆರೆ ಕಟ್ಟೆಯನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಕಟ್ಟೆ ಪುನರ್ ನಿರ್ಮಾಣ ಮಾಡುವ ಮೂಲಕ ಈ ಭಾಗದ ರೈತರ ಹಿತ ಕಾಪಾಡಬೇಕಿದೆ ಎಂದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi