ಎನ್‌ಎಚ್-234ರಲ್ಲಿ ಕಾರು-ಬೈಕ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು

sidlaghatta nh234 bommanahalli gate bike rider death

Sidlaghatta : ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 234ರ ಬೊಮ್ಮನಹಳ್ಳಿ ಗೇಟ್ ಸಮೀಪ ಸೋಮವಾರ ಕಾರು ಮತ್ತು ಟಿವಿಎಸ್ ಚಾಂಪ್ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ರಾಮಚಂದ್ರಪ್ಪ (61) ಎಂದು ಗುರುತಿಸಲಾಗಿದೆ.

ಚಿಂತಾಮಣಿ ಕಡೆಯಿಂದ ಶಿಡ್ಲಘಟ್ಟದತ್ತ ಬರುತ್ತಿದ್ದ ಕಾರು ಬೊಮ್ಮನಹಳ್ಳಿ ಗೇಟ್ ಸಮೀಪ ಟಿವಿಎಸ್ ಚಾಂಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಮಚಂದ್ರಪ್ಪ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿಎಸ್ ಚಾಂಪ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಜಖಂಗೊಂಡಿವೆ. ಅಪಘಾತದಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸ್ಥಳೀಯರು ಹಾಗೂ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಚಿಂತಾಮಣಿ–ಶಿಡ್ಲಘಟ್ಟ ನಡುವಿನ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಗೇಟ್‌ ಗಳು ಹಾಗೂ ಜನವಸತಿ ಪ್ರದೇಶಗಳ ಸಮೀಪ ಅತಿವೇಗದ ವಾಹನ ಸಂಚಾರದಿಂದ ಅಪಘಾತಗಳ ಆತಂಕ ಎದುರಾಗಿದೆ. ಈ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದೇ ಬೊಮ್ಮನಹಳ್ಳಿ ಗೇಟ್ ಬಳಿ ಈ ಹಿಂದೆಯೂ ಅಪಘಾತ ಸಂಭವಿಸಿತ್ತು, ಈ ಪ್ರದೇಶದಲ್ಲಿ ಅಪಘಾತ ವಲಯ ಪುನರಾವರ್ತನೆಯಾಗುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Share
error: Content is protected !!