Veerapura, Sidlaghatta : NSS ಶಿಬಿರದಿಂದ ರಾಷ್ಟ್ರೀಯತೆ, ಭಾವೈಕ್ಯತೆ, ಸಹಬಾಳ್ವೆ, ನಾಯಕತ್ವ ಗುಣ ಬೆಳೆಯುತ್ತದೆ. ಇದರಿಂದ ಯುವಕರಲ್ಲಿ ಸೇವಾ ಮನೋಭಾವದ ಜತೆಗೆ ವೈಜ್ಞಾನಿಕತೆಯೂ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ವೀರಾಪುರ ಸರ್ಕಾರಿ ಶಾಲೆ ಆವರಣದಲ್ಲಿ ಸೋಮವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಹಮ್ಮಿಕೊಂಡಿದ್ದ NSS ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳು ತಮ್ಮದೇ ಆದ ಮಹತ್ವ ಪಡೆದು ಕೊಂಡಿದ್ದು, ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿವೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ನಲ್ಲಿ ತೊಡಿಗಿಕೊಳ್ಳುವುದರಿಂದ ಜೀವನದಲ್ಲಿ ಶಿಸ್ತು ಹಾಗೂ ಸೇವಾ ಮನೋಭಾವ ಮೈಗುಡಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ಸಹ ಎನ್.ಎಸ್.ಎಸ್ ಶಿಬಿರ ಸಹಕಾರಿಯಾಗಿದೆ. ರಾಷ್ಟ್ರಪ್ರೇಮ, ದೇಶಭಕ್ತಿ ಬೆಳೆಯುತ್ತದೆ. ವೈಜ್ಞಾನಿಕ ಚಿಂತನೆಗಳ ಕುರಿತು ಚರ್ಚಿಸಬಹುದು. ಯುವ ಜನತೆ ದಾರಿ ತಪ್ಪದಂತೆ ಮಾರ್ಗದರ್ಶನ ನೀಡಲಾಗುತ್ತದೆ. ವಿದ್ಯಾರ್ಥಿಗಳು ದೇಶದ ಆರ್ಥಿಕ ಭದ್ರತೆ ಕುರಿತು ವಿಶ್ಲೇಷಣೆ ಮಾಡುವ ಎಲ್ಲಾ ಅವಕಾಶಗಳನ್ನು ಈ ವಿಶೇಷ ಶಿಬಿರ ಕಲ್ಪಿಸುತ್ತದೆ. ಇದನ್ನು ಯುವ ಜನತೆ ಸದ್ಭಳಕೆ ಮಾಡಿಕೊಂಡರೆ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸೇವೆ ಮಾಡುವ ಅವಕಾಶ ಎಲ್ಲ ವಿದ್ಯಾರ್ಥಿಗಳಿಗೆ ಲಭಿಸುವುದಿಲ್ಲ. ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಇಂಥ ಸದವಕಾಶ ಲಭ್ಯವಾಗುತ್ತಿದ್ದು, ಇದರಿಂದ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳಿ ಗಿಂತ ವಿಭಿನ್ನವಾಗಿರುತ್ತಾರೆ. ಮತದಾನದ ಹಕ್ಕನ್ನು ಪಡೆದುಕೊಳ್ಳುತ್ತಿರುವ ಯುವಕರಿಗೆ ಎಂಥಹವರನ್ನು ಆಯ್ಕೆ ಮಾಡಬೇಕು ಎಂಬುದು ಈ ಅನುಭವದಿಂದ ದಕ್ಕುತ್ತದೆ ಎಂದರು.
ತಾಲ್ಲೂಕು ಪಂಚಾಯಿತಿ ಇ ಓ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಯೊಂದಿಗೆ ಸಮಾಜಿಕ ಕಳಕಳಿ ಮೂಡಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್ ಶಿಬಿರ ಸ್ಪೂರ್ತಿದಾಯಕ. ವಿದ್ಯಾರ್ಥಿ ಜೀವನ ನಾಲ್ಕು ಗೋಡೆಗಳ ಮಧ್ಯೆ ಕಳೆದರೆ ಯಾವುದೇ ಪ್ರಯೋಜನೆ ಇರುವುದಿಲ್ಲ. ಪಠ್ಯದೊಂದಿಗೆ ಸಾಮಾಜಿಕ ಕಳಕಳಿ ಮೂಡಿಸುವಂತಹ ಎನ್.ಎಸ್.ಎಸ್, ಎನ್.ಸಿ.ಸಿ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಾಗ ಮಾತ್ರವೇ ಅವರ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಪ್ರಾಂಶುಪಾಲ ಎಚ್.ಎನ್.ಶಂಭುಲಿಂಗೇಶ್, ನಗರಸಭೆ ಪೌರಾಯುಕ್ತ ಶ್ರೀಕಾಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿ ಮುನಿರಾಜು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ ದೇವಪ್ಪ, ಡಿ ವೆಂಕಟೇಶ್, ಪಿಡಿಒ ಸುಧಾಮಣಿ ಹಾಜರಿದ್ದರು.
ಸಿ ರಾಮಣ್ಣ, ಮುನಿನಂಜಪ್ಪ, ಬಿ ಮುನಿರೆಡ್ಡಿ, ಪತ್ರಕರ್ತ ಮಂಜುನಾಥ್, ಬಿ ಎ ಲಕ್ಷ್ಮಿಪತಿ, ಆರ್ ಗಣೇಶ್, ಬೂದಾಳ ಶ್ರೀನಿವಾಸ್, ಮುನಿಶಾಮಿರೆಡ್ಡಿ ಇನ್ನು ಇತರರು ಹಾಜರಿದ್ದರು,