
Sidlaghatta : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NUI) ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಬಸ್ ನಿಲ್ದಾಣದ ಬಳಿ ಕೆಲ ಕಾಲ ರಸ್ತೆ ತಡೆ ನಡೆಸಿದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು, ಪರೀಕ್ಷೆಯ ಫಲಿತಾಂಶಗಳ ವಿಳಂಬ, ವಿದ್ಯಾರ್ಥಿ ವೇತನ ಹಾಗೂ ಬಸ್ಸು ಸಾರಿಗೆ ಸಮಸ್ಯೆಗಳು ಸೇರಿದಂತೆ ಸರ್ಕಾರಿ ಕಾಲೇಜು ಶುಲ್ಕ ಹೆಚ್ಚಳ ಸಮಸ್ಯೆಗಳನ್ನು ರಾಜ್ಯ ಬಿಜೆಪಿ ಸರ್ಕಾರ ಕೂಡಲೇ ಸರಿಪಡಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವದಾಗಿ ಅವರು ಹೇಳಿದರು.
ಫಲಿತಾಂಶವನ್ನು ಸರಿಯಾದ ಸಮಯಕ್ಕೆ ನೀಡಬೇಕು, ಸಮಯಕ್ಕೆ ವಿದ್ಯಾರ್ಥಿ ವೇತನ ಬಿಡುಗಡೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸರ್ಕಾರಿ ಕಾಲೇಜು ಶುಲ್ಕ ಕಡಿಮೆ ಮಾಡಬೇಕು, ಇನ್ನು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಕೇತಿಕವಾಗಿ ಅವರು ಪ್ರತಿಭಟನೆ ನಡೆಸಿದರು.
NSUI ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಹಲವಾರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.