Sidlaghatta : ವಿದ್ಯಾರ್ಥಿಗಳು ತಮ್ಮ ಹಕ್ಕು, ಕರ್ತವ್ಯ ಹಾಗೂ ರಕ್ಷಣಾ ಕಾಯಿದೆಗಳನ್ನು ತಿಳಿದುಕೊಳ್ಳಬೇಕು. ಜೊತೆಗೆ ಸಮಾಜದಲ್ಲಿ ಜನತೆಗೆ ಕಾನೂನಿನ ಬಗ್ಗೆ ಜಾಗೃತಿ ಸಹ ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದುಶ್ಚಟಗಳಲ್ಲಿ ತೊಡಗಿಸಿಕೊಳ್ಳದೆ ಕಾನೂನಿನ ಅರಿವು ಹಾಗು ಮಾಹಿತಿ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಬೇಕು ಎಂದರು.
ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್ ಮಾತನಾಡಿ, ಸಂಚಾರ ನಿಯಮಗಳ ಬಗ್ಗೆ ಮಾಹಿತಿ , ಪೋಕ್ಸೋ ಕಾಯಿದೆಯ ಕಾನೂನುಗಳ ಬಗ್ಗೆ ಮಾಹಿತಿ , ಗಾಂಜ ಸೇವನೆ ಮಾಡುವುದರಿಂದ ಏನೆಲ್ಲಾ ತೊಂದರೆಗಳಾಗುತ್ತವೆ, ಅಪರಾಧ ಹಾಗು ಶಿಕ್ಷೆಗಳ ಬಗ್ಗೆ ಮತ್ತು ಹೊಸ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉದಾಹರಣೆಗಳೊಂದಿಗೆ ವಿವರಿಸಿ ಮಾಹಿತಿ ನೀಡಿದರು.
ನಗರಠಾಣೆ ಪಿಎಸ್‌ಐ ಎಂ.ವೇಣುಗೋಪಾಲ್, ಮುಖ್ಯಪೇದೆ ವೆಂಕಟರೋಣಪ್ಪ, ಪ್ರಾಧ್ಯಾಪಕ ಡಾ. ಉಮೇಶ್‌ರೆಡ್ಡಿ ಹಾಜರಿದರು.