Sidlaghatta : ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಗರದಲ್ಲಿ ನಡೆದಿದೆ.
ನಗರದ ತೈಬಾ ನಗರದ ಶೇರ್ ಅಲಿ ಖಾನ್ (52) ಮೃತ ದುರ್ದೈವಿ ಎನ್ನಲಾಗಿದೆ.
ನಗರದ ಕೋಟೆ ವೃತ್ತದ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಷೇರ್ ಅಲಿ ಖಾನ್‌ಗೆ ಬಸ್ ನಿಲ್ದಾಣದ ಕಡೆಯಿಂದ ಬಂದ ಖಾಸಗಿ (ಎಸ್.ಆರ್.ಎಸ್) ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಷೇರ್ ಅಲಿ ಖಾನ್ ನನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.