ಶಿಡ್ಲಘಟ್ಟ ನಗರದ ಅಶೋಕ ರಸ್ತೆಯಲ್ಲಿರುವ ಶಿಡ್ಲಘಟ್ಟ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜೆ.ಎನ್.ರಾಮಚಂದ್ರಪ್ಪ, ಉಪಾಧ್ಯಕ್ಷರಾಗಿ ಎಂ.ಶೋಭಾರಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜೆ.ಎನ್.ರಾಮಚಂದ್ರಪ್ಪ, ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಶೋಭಾರಾಣಿ ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಎಂ.ಮಂಜುನಾಥ ಘೋಷಿಸಿದರು.
ಆಡಳಿತ ಮಂಡಳಿಯ ನಿರ್ದೇಶಕರಾದ ಎ.ನಾಗರಾಜ್, ಬಿ.ನಾರಾಯಣಸ್ವಾಮಿ, ಕೆ.ಎಂ.ನರಸಿಂಹಮೂರ್ತಿ, ಪಿ.ಎನ್.ಪ್ರಶಾಂತ್, ಮಂಜುನಾಥ, ಟಿ.ವಿ.ನಾರಾಯಣಪ್ಪ, ಎನ್.ನರಸಿಂಹಯ್ಯ, ಕೆ.ವೆಂಕಟೇಶಪ್ಪ, ನಳಿನ, ಪ್ರಭಾವತಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೇವಿಕ ಹಾಜರಿದ್ದರು.