ಶಿಡ್ಲಘಟ್ಟ ನಗರದ ಭುವನೇಶ್ವರಿ ವೃತ್ತದಲ್ಲಿ ಶುಕ್ರವಾರ ಕರ್ನಾಟಕ ಜನ ಸೈನ್ಯ ಸಂಘದ ವತಿಯಿಂದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಶಿವಯೋಗಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಜನ ಸೈನ್ಯ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ್ ಮಾತನಾಡಿದರು.
ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಕಾಯಕ ಹಾಗೂ ದಾಸೋಹ ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು.
ಬದುಕಿನುದ್ದಕ್ಕೂ ನಿರಂತರ ಕಾಯಕದಲ್ಲಿ ನಿಷ್ಠೆ ಮೆರೆದು ಸದ್ದಿಲ್ಲದೆ ದಾಸೋಹ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಶ್ರೀಗಳು ಬೆಳಕಾಗಿದ್ದರು ಎಂದರು.
ಈ ಸಂದರ್ಭದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬೂಂದಿ-ಪ್ರಸಾದ ವಿತರಿಸಲಾಯಿತು.
ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಮುಖೇಶ್, ರಿಜ್ವಾನ್ ಪಾಷ, ಜಗದೀಶ್, ಶ್ರೀಧರ್, ಕಿರಣ್, ಬಾಲೂ, ಕುಮಾರ್ ಹಾಜರಿದ್ದರು.